ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌: ಭಾರತಕ್ಕೆ ಮತ್ತೊಂದು ಚಿನ್ನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ(Women’s Boxing Championship) ಭಾರತದ ಲವ್ಲಿನಾ ಬೊರ್ಗೊಹೈನ್​ ಅವರು ಚಿನ್ನದ ಪದಕ ಜಯಿಸಿದ್ದಾರೆ.
ಈ ಮೂಲಕ ಭಾರತ ಭಾನುವಾರ ಒಟ್ಟು 2 ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. ಕೂಟದಲ್ಲಿ ನಾಲ್ಕನೇ ಚಿನ್ನದ ಪದಕವಾಗಿದೆ.

ಲವ್ಲಿನಾ ಬೊರ್ಗೊಹೈನ್ ಅವರು 69 ಕೆಜಿ ವೆಲ್ಟರ್‌ವೆಟ್‌ನಿಂದ 75 ಕೆಜಿ ಮಿಡ್ಲ್ ವೇಟ್‌ಗೆ ಸ್ಪರ್ಧೆಯನ್ನು ಬದಲಿಸಿಕೊಂಡು ಸ್ಪರ್ಧಿಸಿದ್ದರು. ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಅವರು ವಿಶ್ವ ಚಾಂಪಿಯನ್ ಆಗಿ ಇದೀಗ ಇತಿಹಾಸ ನಿರ್ಮಿಸಿದ್ದಾರೆ.

ಫೈನಲ್​ನಲ್ಲಿ ಲವ್ಲಿನಾ ಅವರು ಆಸ್ಟ್ರೇಲಿಯಾದ ಕೈಟ್ಲಿನ್ ಪಾರ್ಕರ್ 5-2 ಅಂತರದಿಂದ ಗೆಲುವು ಸಾಧಿಸಿದರು.ಅಂತಿಮವಾಗಿ ಗೆದ್ದು ಭಾರತಕ್ಕೆ ನಾಲ್ಕನೇ ಚಿನ್ನದ ಪದಕ ತಂದುಕೊಟ್ಟರು.

ಇದಕ್ಕೂ ಮುನ್ನ ನಡೆದ 50 ಕೆಜಿ ವಿಭಾಗದಲ್ಲಿ ನಿಖತ್‌ ಜರೀನ್‌ ಅವರು ಚಿನ್ನಕ್ಕೆ ಮುತ್ತಿಕ್ಕಿದ್ದರು. ಶನಿವಾರ ನಡೆದ 48 ಕೆಜಿ ವಿಭಾಗದಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನ ವಿಜೇತೆ ನೀತು ಗಂಗಾಸ್​ ಅವರು ಮಂಗೋಲಿಯಾದ ಲುತ್ಸಾಯಿಖಾನ್‌ ಅಲ್ಟಂಟ್‌ಸೆಟ್‌ಸೆಗ್‌ ವಿರುದ್ಧ ಚಿನ್ನ ಗೆದ್ದು ಭಾರತಕ್ಕೆ ಮೊದಲ ಪದಕದ ಖಾತೆ ತೆರೆದಿದ್ದರು. ಇದರ ಬೆನ್ನಲ್ಲೇ 81 ಕೆಜಿ ವಿಭಾಗದಲ್ಲಿ ಸ್ವೀಟಿ ಬೂರಾ ಚೀನಾದ ವಾಂಗ್‌ ಲೀನಾ ಅವರನ್ನು ಮಣಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!