ಮಹಿಳಾ ವಿಶ್ವಕಪ್: ಫೈನಲ್ ಗೆ ಎಂಟ್ರಿಕೊಟ್ಟ ಇಂಗ್ಲೆಂಡ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ವಿಶ್ವಕಪ್ ನ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಫೈನಲ್ ತಲುಪಿದೆ. ಈ ಮೂಲಕ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿದೆ.
ಇಂದು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 137 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಎಂಟು ವಿಕೆಟ್ ನಷ್ಟಕ್ಕೆ 293 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾ ತಂಡ 38 ಓವರ್ ಗಳಲ್ಲಿ ಕೇವಲ 156 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!