ಇಂದು 74ನೇ ಸೇನಾ ದಿನ: “ಸೈನಿಕರ ಸೇವೆ, ತ್ಯಾಗವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ”

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೈನಿಕರ ಸೇವೆ, ತ್ಯಾಗವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು 74ನೇ ಸೇನಾ ದಿನದಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಸೇನಾ ದಿನದ ಬಗ್ಗೆ ಟ್ವೀಟ್ ಮಾಡಿದ ಅವರು, ಯಾವುದೇ ಪ್ರತಿಕೂಲದ ವಾತಾವರಣ, ಪ್ರದೇಶಗಳಲ್ಲಿ ನಿತ್ಯ ಸೇವೆ ಸಲ್ಲಿಸುತ್ತಾರೆ. ದೇಶ ನೈಸರ್ಗಿಕ ವಿಕೋಪಗಳಂತಹ ಸಮಸ್ಯೆಗಳನ್ನು ಎದುರಿಸುವಾಗ ಸೈನಿಕರು ನೆರವಿಗೆ ಧಾವಿಸುತ್ತಾರೆ. ಸಾಗರೋತ್ತರ ಶಾಂತಿ ಪಾಲನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸೇವೆಯನ್ನು, ತ್ಯಾಗವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸೈನಿಕರಿಗೆ, ಅವರ ಕುಟುಂಬದವರಿಗೆ ಸೇನಾ ದಿನದ ಶುಭಾಶಯಗಳು ಎಂದು ಪ್ರಧಾನಿ ತಿಳಿಸಿದ್ದಾರೆ.
ದೇಶಾದ್ಯಂತ ಭಾರತೀಯ ಸೇನಾ ಕಮಾಂಡರ್ ಇನ್ ಚೀಫ್ ಆಗಿದ್ದ ಫೀಲ್ಡ್ ಮಾರ್ಷಲ್ ಕೊಡಂಡೇರ ಮಾದಪ್ಪ ಕಾರಿಯಪ್ಪ ಅವರ ಸ್ಮರಣೆಯಲ್ಲಿ ಈ ದಿನವನ್ನು ಸೇನಾ ದಿನ ಎಂದು ಆಚರಿಸಲಾಗುತ್ತದೆ.
ಏ.1 1895ರಲ್ಲಿ ಬ್ರಿಟಿಷ್ ಆಡಳಿತದಲ್ಲಿ ಬ್ರಿಟ್ ಇಂಡಿಯನ್ ಆರ್ಮಿ ಸ್ಥಾಪನೆಗೊಂಡಿತ್ತು. ಇದನ್ನು ಬ್ರಿಟಿಷ್ ಇಂಡಿಯನ್ ಆರ್ಮಿ ಎಂದು ಕರೆಯಲಾಗಿತ್ತು. ಸ್ವಾತಂತ್ರ್ಯದ ನಂತರ ಭಾರತೀಯ ಸಶಸ್ತ್ರ ಪಡೆಗಳ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿದ್ದವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ. ಆ ದಿನವನ್ನು ಸೇನಾ ದಿನ ಎಂದು ಆಚರಿಸಲಾಗುತ್ತದೆ.
ಪ್ರತಿ ವರ್ಷ ದೆಹಲಿಯ ಇಂಡಿಯಾ ಗೇಟ್ ನಲ್ಲಿರುವ ಅಮರ್ ಜವಾನ್ ಸ್ಮಾರಕಕ್ಕೆ ಭಾರತೀಯ ಸೇನೆಯಿಂದ ಗೌರವ ಸಲ್ಲಿಸಲಾಗುತ್ತದೆ. ಈ ದಿನದಂದು ದೇಶಕ್ಕೆ ಪ್ರಾಣ ಅರ್ಪಿಸಿದ ಸೈನಿಕರಿಗೆ ಗೌರವ ಸಲ್ಲಿಸಲಾಗುತ್ತದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!