ಹೊರಗೆ ಬರೋದೇ ಬೇಡ ಮನೆಯಿಂದಲೇ ಕೆಲಸ ಮಾಡಿ, ಬೆಂಗಳೂರಿನ ಉದ್ಯೋಗಿಗಳಿಗೆ WFH

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಿಂಚು ಸಹಿತ ಸಾಧಾರಣದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಅಂಗನವಾಡಿಗಳು, ಕೆಲವು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡಲು ಸೂಚಿಸಲಾಗಿದೆ. ಮನೆಯಿಂದ ಹೊರಬಂದರೆ ಆಫೀಸ್‌ ತಲುಪಲು ಗಂಟೆಗಟ್ಟಲೆ ಆಗುವ ಕಾರಣ, ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ವರ್ಕ್‌ ಫ್ರಂ ಹೋಮ್‌ ನೀಡಲಾಗ

ಕರ್ನಾಟಕದ ಮಳೆ ಪೀಡಿತ ಪ್ರದೇಶಗಳಲ್ಲಿ ದಕ್ಷಿಣ ಕನ್ನಡ, ಬಿಜಾಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಸೇರಿವೆ.

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬುಧವಾರ ಬೆಂಗಳೂರಿನಲ್ಲಿ ಪ್ರವಾಹ ಪರಿಹಾರಕ್ಕಾಗಿ ಮಳೆನೀರು ಚರಂಡಿ ಒತ್ತುವರಿಯನ್ನು ಕಟ್ಟುನಿಟ್ಟಾಗಿ ತೆರವುಗೊಳಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ. ಮಂಗಳವಾರ ಕೆಂಗೇರಿ ಕೆರೆಯಲ್ಲಿ ಮುಳುಗಡೆಯಾದ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!