ಹಾಡಿ ಜನರ ಆರೋಗ್ಯ ಸುಧಾರಣೆಗೆ ಶ್ರಮಿಸಿ: ಭಂವರ್ ಸಿಂಗ್ ಮೀನಾ

ಹೊಸದಿಗಂತ ವರದಿ ಮಡಿಕೇರಿ:

ಹಾಡಿ ಜನರ ಆರೋಗ್ಯದ ಬಗ್ಗೆ ಗಮನಹರಿಸಿ ಹಾಗೂ ಮೂಲ ಸೌಕರ್ಯ ಕಲ್ಪಿಸುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗೆ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಆದೇಶಿಸಿದರು. ಬೊಮ್ಮಾಡು ಮತ್ತು ಕೊಡಂಗೆ ಹಾಡಿಗಳಿಗೆ ಭೇಟಿ ನೀಡಿ, ಹಾಡಿ ಜನರ ಯೋಗಕ್ಷೇಮ ವಿಚಾರಿಸಿದ ಸಿಇಒ ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಲು ತಾಲೂಕು ಆರೋಗ್ಯಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಬೊಮ್ಮಾಡು ಆಶ್ರಮ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ಪಡೆದರು.  ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪೌಷ್ಟಿಕಾಹಾರ ನೀಡುವಂತೆ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಆದೇಶಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉತ್ತಮವಾದ ಪೌಷ್ಟಿಕಾಂಶವುಳ್ಳ ಆಹಾರ ನೀಡಿ, ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮಗ್ರ ಕೆರೆ ಅಭಿವೃದ್ಧಿ, ಅಮೃತ ಸರೋವರ, ಮೈದಾನ ಅಭಿವೃದ್ಧಿ ಸಂಬಂಧ ತಾಲೂಕಿನ ಶ್ರೀಮಂಗಲ, ಹುದಿಕೇರಿ, ಕೆ.ಬಾಡಗ, ಪೊನ್ನಂಪೇಟೆ ಗ್ರಾಮ ಪಂಚಾಯಿತಿಗಳಿಗೆ ತೆರಳಿ ಸ್ಥಳ ಪರಿಶೀಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!