ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಯ್ಲರ್ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ನಡೆದಿದೆ.
ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿ.
ಇತ್ತೀಚೆಗಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್, ಇಂದು ಬೆಳಗ್ಗೆ ಬೂದಿ ತೆಗೆಯುವ ವೇಳೆ ಬಾಯ್ಲರ್ ಮೆಷಿನ್ ಬೆಲ್ಟ್ಗೆ ಸಿಲುಕಿ ಮೃತಪಟ್ಟಿದ್ದಾರೆ.
ಕೂಡಲೇ ರಾಕೇಶನ್ನನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.