ವಿಜಯಪುರದ ಎನ್’ಟಿಪಿಸಿ ಘಟಕದಲ್ಲಿ 133 ಅಡಿಯಿಂದ ಬಿದ್ದು ಕಾರ್ಮಿಕ ಸಾವು

ದಿಗಂತ ವರದಿ ವಿಜಯಪುರ:

ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎನ್’ಟಿಪಿಸಿ ಘಟಕದಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ಕಿಶನಕುಮಾರ್ ಭಾರಧ್ವಾಜ್ (33) ಮೃತಪಟ್ಟ ಕಾರ್ಮಿಕ.

ಇಲ್ಲಿನ ಎನ್ ಟಿಪಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮೇಲಿಂದ ಬಿದ್ದು ಅಸುನೀಗಿದ್ದಾನೆ. ಇದರಿಂದ ಕೂಡಗಿ ಎನ್‌ಟಿಪಿಸಿ ಘಟಕದ ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡಗಿ ಎನ್‌ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!