ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಡಗಿನ ಮಡಿಕೇರಿಯಲ್ಲಿ ಹೊಸದಾಗಿ ನಿರ್ಮಿಸಲಾಗಿದ್ದ ಆಸ್ಪತ್ರೆ ಕಟ್ಟಡದಿಂದ ಬಿದ್ದು ನೌಕರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಲ್ಕತ್ತ ಮೂಲದ ಕೂಲಿ ಕಾರ್ಮಿಕ ರಾಕಿಬ್ (22) ಮೃತಪಟ್ಟವರು.
ಮುಂಜಾನೆ ಆಸ್ಪತ್ರೆಯ ರಿಸೆಪ್ಷನ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯಾ ತಪ್ಪಿ ಕೆಳಗೆ ಬಿದ್ದಿದ್ದಾರೆ. ಸುಮಾರು 30 ಅಡಿ ಎತ್ತರದ ಸಿಮೆಂಟ್ ನೆಲಕ್ಕೆ ಬಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಡಿಕೇರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸದಿರುವುದು ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಮೃತದೇಹವನ್ನು ಶವಾಗಾರಕ್ಕೆ ಕಳುಹಿಸಿಸಲಾಗಿದ್ದು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.