ಹೊಸದಿಗಂತ ವರದಿ, ವಿಜಯನಗರ:
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಸಮೀಪದ ಬಿಎಂಎಂ ಕಾರ್ಖಾನೆಯ ಬಿಸಿನೀರಿನ ಬಾಯ್ಲರ್ ಹೊಂಡಕ್ಕೆ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮೃತನನ್ನು ಕಮಲಾಪುರ ನಿವಾಸಿ ನಾಗರಾಜ(39) ಎಂದು ಗುರುತಿಸಲಾಗಿದೆ. ಬಾಯ್ಲರ್ ನಲ್ಲಿ ಪಂಪ್ ಹೌಸ್ ಆಪರೇಟಿರ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜ್, ಶುಕ್ರವಾರ ರಾತ್ರಿ ಪಾಳೆಯದಲ್ಲಿ ಕೆಲಸ ನಿರ್ವಹಿಸುವ ವೇಳೆ ಬೆಳಗಿನ ಜಾವ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ.
ತಕ್ಷಣ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು.