Thursday, March 30, 2023

Latest Posts

ವಿದ್ಯುತ್ ಸ್ಪರ್ಶಗೊಂಡು ಕಾರ್ಮಿಕ ಸಾವು !

ಹೊಸದಿಗಂತ ವರದಿ ಮಡಿಕೇರಿ :

ವಿದ್ಯುತ್ ತಂತಿಗೆ ಅಲ್ಯುಮಿನಿಯಂ ಏಣಿ ತಗುಲಿ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಸಾವಿಗೀಡಾದ ಘಟನೆ ದಕ್ಷಿಣ ಕೊಡಗಿನ ನಾಲ್ಕೇರಿಯಲ್ಲಿ ನಡೆದಿದೆ.

ನಾಲ್ಕೇರಿಯ ಶಿವಾಚಾರರ ವಿನಯ್ ಎಂಬವರ ತೋಟದಲ್ಲಿ ಕರಿಮೆಣಸು ಕೊಯ್ಯುತ್ತಿದ್ದ ಸಂದರ್ಭ ವಿದ್ಯುತ್ ತಂತಿಗೆ ಅಲ್ಯುಮಿನಿಯಂ ಏಣಿ ತಗುಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತನನ್ನು ಅಸ್ಸಾಂ ಮೂಲದ ಅಬ್ರುದ್ದೀನ್ ಎಂದು ಗುರುತಿಸಲಾಗಿದೆ.

ವಿದ್ಯುತ್ ತಗುಲಿ ಆಘಾತದಿಂದ‌ ಕೆಳಕ್ಕೆ ಬಿದ್ದ ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವಿಗೀಡಾಗಿದ್ದಾನೆ. ಕುಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!