ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: ಓರ್ವ ಸಾವು, ಮೂವರು ನಾಪತ್ತೆ, 20 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಮಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಸೂರತ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಚಿನ್ ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಪ್ರದೇಶದಲ್ಲಿರುವ ಅನುಪಮ್ ರಸಾಯನ್ ಇಂಡಿಯಾ ಲಿಮಿಟೆಡ್ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ 10:30 ಕ್ಕೆ ಭಾರಿ ಸ್ಫೋಟ ಸಂಭವಿಸಿದ ನಂತರ ಈ ಘಟನೆ ಸಂಭವಿಸಿದೆ ಎಂದು ಸೂರತ್ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ಹೇಳಿದ್ದಾರೆ.

‘ನೋಡ ನೋಡುತ್ತಿದ್ದಂತೆ ಇಡೀ ಫ್ಯಾಕ್ಟರಿ ಹೊತ್ತಿ ಉರಿದಿದ್ದು, ಇದನ್ನು ಗಮನಿಸಿದ ಕಾರ್ಖಾನೆಯ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ. ಆದರೆ ಒಬ್ಬ ಕಾರ್ಮಿಕ ಅಲ್ಲಿಯೇ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ. ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಹದಿನೈದು ಅಗ್ನಿಶಾಮಕ ವಾಹನಗಳು ಬಂದು ಬೆಂಕಿ ನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!