ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ಮೂವರು ದುರ್ಮರಣ; ಇಬ್ಬರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬುಧವಾರ ಮುಂಜಾನೆ ನಿರ್ಮಾಣ ಹಂತದ ಕಟ್ಟಡದ ಗೋಡೆಯೊಂದು ಕುಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಇನ್ನಿಬ್ಬರನ್ನು ರಕ್ಷಣಾ ತಂಡವು ಹೊರತಂದಿದೆ.
ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಜೀವಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಜಯನಗರ ಠಾಣೆ ವ್ಯಾಪ್ತಿಯ ಘಾಜಿಯಾಬಾದ್​ನ ಡಿಎವಿ ಚೌಕ್​​ನಲ್ಲಿ ದುರ್ಘಟನೆ ನಡೆದಿದೆ. ಮಂಗಳವಾರ ರಾತ್ರಿಪೂರ್ತಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಟ್ಟಡ ಕುಸಿದ ಬೆನ್ನಲ್ಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದೆ. ಮೂರು ಮೃತದೇಹಗಳನ್ನು ಹೊರತೆಗೆದು ಪೋಸ್ಟ್​ಮಾರ್ಟಮ್​​ಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!