ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ವರದಿ, ಮಡಿಕೇರಿ:
ಚೇರಂಬಾಣೆ ಕೊಳಗದಾಳು ಬಳಿಯ ಪಾಕ ರಸ್ತೆಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದ ಸಂದರ್ಭ ಕಾಂಕ್ರೀಟ್ ಲಾರಿ ಮಗುಚಿ ಬಿದ್ದು, ಸಾವಿಗೀಡಾಗಿದ್ದ ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಭಾನುವಾರ ಹೊರತೆಗೆಯಲಾಗಿದೆ.
ಶನಿವಾರ ಸಂಜೆ ಪಾಕ ಗ್ರಾಮದಲ್ಲಿ ನಡೆದ ದುರ್ಘಟನೆಯಲ್ಲಿ ಗದಗ ಮೂಲದ ಸಂತೋಷ್ ಭಂಡಾರಿ(27) ಮತ್ತು ಪ್ರವೀಣ್(21) ಎಂಬವರು ಸಾವಿಗೀಡಾಗಿದ್ದರು.
ಮೃತದೇಹಗಳನ್ನು ಭಾನುವಾರ ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.
ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಗುತ್ತಿಗೆದಾರ ಮತ್ತು ಲಾರಿ ಚಾಲಕನ ವಿರುದ್ಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.