ವೈದ್ಯರನ್ನು 36 ಗಂಟೆಗಳ ಕಾಲ ದುಡಿಸಿಕೊಳ್ಳುವುದು ಅಮಾನವೀಯ: ಸುಪ್ರೀಂಕೋರ್ಟ್‌ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ದೇಶಾದ್ಯಂತ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ವೈದ್ಯರನ್ನು 36 ಗಂಟೆಗಳ ಕಾಲ ನಿರಂತರವಾಗಿ ದುಡಿಸಿಕೊಳ್ಳುವುದು ಅಮಾನವೀಯ. ಈ ಬಗ್ಗೆ ಕ್ರಮ ಕೈಗೆತ್ತಿಕೊಳ್ಳುವಂತೆ ಕಾರ್ಯಪಡೆ(Task Force)ಗೆ ಸುಪ್ರೀಂಕೋರ್ಟ್‌ ಆದೇಶಿಸಿದೆ.

ದೇಶಾದ್ಯಂತ ಇರುವ ವೈದ್ಯರ ಕರ್ತವ್ಯದ ಅವಧಿ ಬಗ್ಗೆ ನಾವು ತೀವ್ರ ಕಳವಳ ವ್ಯಕ್ತಪಡಿಸಿದ್ದೇವೆ. ಕೆಲವು ವೈದ್ಯರು 36 ಗಂಟೆಗಳ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ನೇಮಕಗೊಂಡ 10 ಮಂದಿ ಸದಸ್ಯರ ಕಾರ್ಯಪಡೆ ಈ ಬಗ್ಗೆ ತನಿಖೆ ನಡೆಸಿ ಎಲ್ಲಾ ವೈದ್ಯರ ಕರ್ತವ್ಯದ ಸಮಯವನ್ನು ಸುವ್ಯವಸ್ಥಿತಗೊಳಿಸಲು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಕೋಲ್ಕತ್ತಾ ಪೊಲೀಸರ ತನಿಖೆಯಲ್ಲಿನ ವಿಳಂಬ ಮತ್ತು ಸ್ಪಷ್ಟ ಅಕ್ರಮಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತು. ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲು ಪೊಲೀಸರು ವಿಳಂಬ ಮಾಡಿರುವುದು ಅತ್ಯಂತ ಗೊಂದಲದ ಸಂಗತಿಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!