ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಒಂದು ವಾರದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಡೊನಾಲ್ಡ್ ಟ್ರಂಪ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಜನವರಿ 27, 2025) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದು, ಟ್ರಂಪ್ ಅಧ್ಯಕ್ಷರಾದ ನಂತರ ಉಭಯ ನಾಯಕರು ಮೊದಲ ಬಾರಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ಈ ವೇಳೆ ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್ ಅವರು ‘ಐತಿಹಾಸಿಕ’ವಾಗಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರಿಂದ ಅಭಿನಂದನೆ ಸಲ್ಲಿಸಿದರು.
ದೂರವಾಣಿ ಕರೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ‘ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದ್ದು ನನಗೆ ತುಂಬಾ ಸಂತೋಷವಾಯಿತು. ಅವರ ಐತಿಹಾಸಿಕ ಎರಡನೇ ಅವಧಿಗೆ ನಾನು ಅಭಿನಂದಿಸಿದೆ. ಬಳಿಕ ನಾವು ಪರಸ್ಪರ ಲಾಭದಾಯಕ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಗೆ ಬದ್ಧರಾಗಿದ್ದೇವೆ. ನಮ್ಮ ಜನರ ಕಲ್ಯಾಣ ಮತ್ತು ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಭದ್ರತೆಗಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಎಕ್ಸ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.