ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕ್ಷಣ ಸಚಿವಾಲಯ ಮತ್ತು ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದಲ್ಲಿ ಸಚಿವರಾಗಿ ನೇಮಕಗೊಂಡ ನಂತರ, ಬಿಜೆಪಿ ನಾಯಕ ಸುಕಾಂತ ಮಜುಂದಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡುವುದೇ ದೊಡ್ಡ ಸಾಧನೆಯಾಗಿದೆ ಎಂದು ಪ್ರತಿಪಾದಿಸಿದರು.
ಸುಕಾಂತ ಮಜುಂದಾರ್ ಮಾತನಾಡಿ, “ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿದ್ದು ದೊಡ್ಡ ಸಾಧನೆಗಳಲ್ಲಿ ಒಂದಾಗಿದೆ… ನನ್ನಂತಹ ಸಾಮಾನ್ಯ ಪಕ್ಷದ ಕಾರ್ಯಕರ್ತನಿಗೆ ಇಂತಹ ದೊಡ್ಡ ಜವಾಬ್ದಾರಿಯನ್ನು ನೀಡಿರುವುದು ನನಗೆ ಅತ್ಯಂತ ಗೌರವದ ಸಂಗತಿಯಾಗಿದೆ.” ಎಂದಿದ್ದಾರೆ.
“ಪ್ರಧಾನಿ ಮೋದಿಯವರ ಧ್ಯೇಯ ಮತ್ತು ದೂರದೃಷ್ಟಿಯನ್ನು ಮುಂದಕ್ಕೆ ಕೊಂಡೊಯ್ಯಲು ನಾವು ಕೆಲಸ ಮಾಡುತ್ತೇವೆ. ಅವರು ಬಹಳ ದೂರದೃಷ್ಟಿಯ ವ್ಯಕ್ತಿ ಮತ್ತು ಅವರಂತೆ ಯಾರೂ ಇರಲು ಸಾಧ್ಯವಿಲ್ಲ.” ಎಂದು ಹೇಳಿದ್ದಾರೆ.