ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವಕಪ್ 2023 (Cricket World Cup 2023) ರ ಐದು ಪಂದ್ಯಗಳು ರಾಜ್ಯ ರಾಜಧಾನಿಯಲ್ಲಿರುವ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ (Chinnaswamy Stadium) ನಡೆಯಲಿವೆ.
ಹೀಗಾಗಿ ಪಂದ್ಯಗಳನ್ನು ವೀಕ್ಷಣೆ ಮಾಡಲು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ ಆಗುವಂತೆ ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ವತಿಯಿಂದ ಹೆಚ್ಚುವರಿಯಾಗಿ ಬಸ್‌ಗಳನ್ನು ಬಿಡಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 20, ಅಕ್ಟೋಬರ್ 26, ನವೆಂಬರ್ 04, ನವೆಂಬರ್ 09 ಮತ್ತು ನವೆಂಬರ್ 12ರಂದು ಒಟ್ಟು 5 ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಈ ದಿನಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಮಾರ್ಗವಾಗಿ ಹೆಚ್ಚುವರಿ ಬಿಎಂಟಿಸಿ ಬಸ್ಸುಗಳು ಸಂಚಾರ ಮಾಡಲಿವೆ ಎಂದು ಬಿಎಂಟಿಸಿ ತಿಳಿಸಿದೆ.
ಈಗಾಗಲೇ ಟ್ರಾಫಿಕ್ ರಹಿತ ಸಂಚಾರಕ್ಕೆ ಅನುಕೂಲ ಆಗಿರುವ ಮೆಟ್ರೋ ರೈಲುಗಳ ಹೆಚ್ಚುವರಿ ಸೇವೆ ನೀಡಲು ಮುಂದಾಗಿದೆ. ಹೆಚ್ಚುವರಿ ಮೆಟ್ರೋ ನಿಯೋಜನೆ ಬೆನ್ನಲ್ಲೇ ಇದೀಗ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.
ಯಾವ್ಯಾವ ಮಾರ್ಗವಾಗಿ ಹೆಚ್ಚು ಬಸ್ಸುಗಳು?
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಚ್.ಎ.ಎಲ್ ರಸ್ತೆ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣಕ್ಕೆ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೂಡಿ ರಸ್ತೆ ಮಾರ್ಗವಾಗಿ ಕಾಡುಗೋಡಿ ಬಸ್ ನಿಲ್ದಾಣಕ್ಕೆ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಅಗರ, ದೊಮ್ಮಸಂದ್ರ ಮಾರ್ಗವಾಗಿ ಸರ್ಜಾಪುರಕ್ಕೆ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ ಸಿಟಿಗೆ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಜಯದೇವ ಆಸ್ಪತ್ರೆಯಿಂದ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ವರೆಗೆ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಂಸಿಟಿಸಿ, ನಾಯಂಡನಹಳ್ಳಿ ಮಾರ್ಗವಾಗಿ ಕೆಂಗೇರಿಗೆ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಗಡಿ ರಸ್ತೆ ಮೂಲಕ ಜನಪ್ರಿಯ ಟೌನ್ ಶಿಪ್
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಯಶವಂತಪುರ ಮಾರ್ಗವಾಗಿ ನೆಲಮಂಗಲ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಬ್ಬಾಳ ಮಾರ್ಗವಾಗಿ ಯಲಹಂಕಾ 5 ನೇ ಹಂತ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ನಾಗಾವರ ಮಾರ್ಗವಾಗಿ ಆರ್.ಕೆ ಹೆಗಡೆ ನಗರ ಯಲಹಂಕಾ
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹೆಣ್ಣೂರು ರಸ್ತೆ ಮೂಲಕ ಬಾಗಲೂರು
ಚಿನ್ನಸ್ವಾಮಿ ಕ್ರೀಡಾಂಗಣದಿಂದ ಟಿನ್ ಫ್ಯಾಕ್ಟರಿ ಮಾರ್ಗವಾಗಿ ಹೊಸಕೋಟೆಗೆ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಧರ್ಮಸ್ಥಳದಲ್ಲಿ ದುಷ್ಟರಿಗೆ ಬಲಿಯಾದ ಸೌಜನ್ಯಾ ಪ್ರತಿಮೆ ಪ್ರತಿಷ್ಠಾಪನೆ: 28ನೇ ಹುಟ್ಟುಹಬ್ಬ ಆಚರಣೆ