ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾದ ವಿಕ್ಟರಿ ಪರೇಡ್ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು ಮಾಯ ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.
ಮುಂಬೈನ ನಾರೀಮನ್ ಪಾಯಿಂಟ್ನಿಂದ ರೋಡ್ ಶೋ ಆರಂಭವಾಗಲಿದ್ದು, ಸುಮಾರು 2 ಕಿಮೀ ವಿಜಯಯಾತ್ರೆ ನಡೆಯಲಿದೆ. ಬಳಿಕ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನೂ ಪ್ರದಾನ ಮಾಡಲಾಗುತ್ತದೆ. ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾದು ಕುಳಿತಿದ್ದಾರೆ.
ಈಗಾಗಲೇ ಟೀಂ ಇಂಡಿಯಾದ ಆಟಗಾರರು ವಿಶೇಷ ವಿಮಾನದಲ್ಲಿ ಮುಂಬೈ ತಲುಪಿಸಿದ್ದಾರೆ. ಏರ್ ಇಂಡಿಯಾದ ವಿಮಾನ ಮುಂಬೈ ತಲುಪುತ್ತಿದ್ದಂತೆ ವಿಶೇಷ ರೀತಿಯಲ್ಲಿ ವಾಟರ್ ಜೆಟ್ಗಳ ಮೂಲಕ ಸ್ವಾಗತ ಕೋರಲಾಗಿದೆ. ವಿಜಯಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದು, ‘ಮುಂಬೈನ ನಾರೀಮನ್ ಪಾಯಿಂಟ್ನಿಂದ ರೋಡ್ ಶೋ ಆರಂಭವಾಗಲಿದೆ.