17 ವರ್ಷಗಳ ಬಳಿಕ ವಿಶ್ವಕಪ್ ಕಿರೀಟ: T20I ಕ್ರಿಕೆಟ್​​ಗೆ ಟೀಮ್ ಇಂಡಿಯಾ ‘ದಿಗ್ಗಜರು’ ವಿದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಗೆದ್ದ ನಂತರ ಅಂತರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದು ಇಬ್ಬರು ಭಾರತೀಯ ಶ್ರೇಷ್ಠ ಆಟಗಾರರ T20I ವೃತ್ತಿಜೀವನದ ಅಂತ್ಯವನ್ನು ತೋರುತ್ತಿದೆ.

ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಈ ಪ್ರಶಸ್ತಿ ಸ್ವೀಕರಿಸಿದ ಬಳಿಕ ಕಿಂಗ್ ಕೊಹ್ಲಿ, ಇದು ನನ್ನ ಕೊನೆಯ ಟಿ20 ವಿಶ್ವಕಪ್ ಟೂರ್ನಿ ಎಂದು ಹೇಳಿದ್ದಾರೆ. ಈ ಗೆಲುವಿನೊಂದಿಗೆ ತಮ್ಮ ಅಂತರಾಷ್ಟ್ರೀಯ ಟಿ20 ವೃತ್ತಿಜೀವನವನ್ನು ಅಂತ್ಯಗೊಳಿಸಲು ಬಯಸುವುದಾಗಿ ಹೇಳಿದ್ದಾರೆ.

ವಿಶ್ವಕಪ್ ನಂತರದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ, “ನಾನು ಭಾರತದಲ್ಲಿ ಟಿ20 ಪಂದ್ಯವನ್ನು ಆಡುವ ಮೂಲಕ ನನ್ನ ವೃತ್ತಿಜೀವನವನ್ನು ಪ್ರಾರಂಭಿಸಿದೆ. ನನ್ನ ಅಂತರಾಷ್ಟ್ರೀಯ ಟಿ20 ವೃತ್ತಿಜೀವನಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಈ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳುತ್ತಿದ್ದೇನೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ವಿಶ್ವಕಪ್ ಗೆಲುವಿನೊಂದಿಗೆ ಇಬ್ಬರೂ ದಿಗ್ಗಜರು ತಮ್ಮ ಅಂತರಾಷ್ಟ್ರೀಯ T20 ವೃತ್ತಿಜೀವನವನ್ನು ಒಟ್ಟಿಗೆ ಕೊನೆಗೊಳಿಸಿದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂದಿನ ದಿನಗಳಲ್ಲಿ ಭಾರತ ಟಿ20 ತಂಡದ ಭಾಗವಾಗಿರುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!