ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್  ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದೆ. ನವಿಮುಂಬೈನ ಡಾ. ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯುವ ಭಾರತತಂಡ ದಕ್ಷಿಣ ಆಫ್ರಿಕಾ ತಂಡದ ಸವಾಲು ಎದುರಿಸಲಿದೆ.
ಇತ್ತ ಭಾರತ ತಂಡದ ಗೆಲುವಿಗಾಗಿ ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳು ಸ್ತೋತ್ರ, ಶ್ಲೋಕ ಪಠಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿವಿಧ ಸ್ಟಾರ್ ಆಟಗಾರರ ಭಾವಚಿತ್ರಗಳನ್ನು ಹಿಡಿದು ಜಯ ಘೋಷ ಕೂಗಿದ್ದಾರೆ.
ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಆಟಗಾರ್ತಿಯರಾದ ರಿಷಾ ಘೋಷ್, ಶಫಾಲಿ ವರ್ಮ, ರೇಣುಕಾ ಸಿಂಗ್ ಠಾಕೂರ್ ಮುಂಬೈನಲ್ಲಿರುವ ಪ್ರಸಿದ್ಧ ಸಿದ್ದಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರ್ನಾಟಕ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿರುವ ಹಜರತ್ ಸೈಯದ್ ಯಾಕೂಬ್ ಸಾಹಿನ್ ಮಂದಿರದಲ್ಲಿ, ಗುಜರಾತ್ನ ಬೋಟಾಡ್‌ನಲ್ಲಿ ಕಷ್ಟಭಂಜನ್ ದೇವ್ ಹನುಮಂಜಿ ಮಹಾರಾಜರ ವಿಶಿಷ್ಟ ದರ್ಶನ ಪಡೆದ ಕ್ರಿಕೆಟ್ ಅಭಿಮಾನಿಗಳು ಭಾರತ ಗೆಲುವಿಗಾಗಿ ಪ್ರಾರ್ಥಿಸಿದರು. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಯೂ ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ಶ್ರೀ ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

                                    