Wednesday, November 5, 2025

ವಿಶ್ವಕಪ್ ಗೆದ್ದ ಸ್ಮೃತಿ ಮಂಧನಾ, ಜೆಮಿಮಾ, ರಾಧಾಗೆ ಜಾಕ್‌ಪಾಟ್: ಬಂಪರ್ ನಗದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಭಾರತೀಯ ತಂಡದ ಆಟಗಾರ್ತಿ, ಸ್ಮೃತಿ ಮಂಧನಾ, ಜೆಮಿಮಾ ರೋಡ್ರಿಗ್ಸ್ ಮತ್ತು ರಾಧಾ ಯಾದವ್ ಅವರಿಗೆ ಮಹಾರಾಷ್ಟ್ರ ಸರ್ಕಾರ ಭರ್ಜರಿ ಬಹುಮಾನ ಘೋಷಿಸಿದೆ.

ಮೂವರು ಆಟಗಾರ್ತಿಯರಿಗೆ ತಲಾ 2.25 ಕೋಟಿ ರೂಪಾಯಿ ಬಹುಮಾನ ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಇದಲ್ಲದೆ, ಮುಂಬೈ ಮೂಲದ ಭಾರತೀಯ ತಂಡದ ಕೋಚ್ ಅಮೋಲ್ ಮಜುಂದಾರ್ ಅವರಿಗೆ 22.5 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.

ಟೂರ್ನಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಸ್ಮೃತಿ ಮಂಧನಾ. ಸ್ಮೃತಿ ಮಂಧನಾ ಪರ ಭಾರತ ಪರ 9 ಪಂದ್ಯಗಳನ್ನಾಡಿ 54.25ರ ಬ್ಯಾಟಿಂಗ್ ಸರಾಸರಿಯಲ್ಲಿ ಒಂದು ಶತಕ ಹಾಗೂ ಎರಡು ಅರ್ಧಶತಕ ಸಹಿತ 434 ರನ್ ಸಿಡಿಸಿದ್ದರು. ಇನ್ನು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 127 ರನ್ ಗಳಿಸಿ ಭಾರತದ ಸ್ಮರಣೀಯ ಗೆಲುವಿಗೆ ಜೆಮಿಮಾ ರೋಡ್ರಿಗ್ಸ್‌ ಅವರ ಅಜೇಯ ಶತಕ ಕಾರಣವಾಗಿತ್ತು. ಸೆಮಿಫೈನಲ್ ಮತ್ತು ಫೈನಲ್ ಎರಡರಲ್ಲೂ ರಾಧಾ ಯಾದವ್ ಭಾರತದ ಆಡುವ ಹನ್ನೊಂದರ ಬಳಗದಲ್ಲಿದ್ದರು.

ರೇಣುಕಾ ಸಿಂಗ್‌ಗೆ ಒಂದು ಕೋಟಿ ರುಪಾಯಿ ಬಹುಮಾನ
ಭಾರತದ ಆಟಗಾರ್ತಿ ರೇಣುಕಾ ಠಾಕೂರ್‌ಗೆ ಹಿಮಾಚಲ ಪ್ರದೇಶ ಸರ್ಕಾರ ಮತ್ತು ಭಾರತದ ವೇಗಿ ಕ್ರಾಂತಿ ಗೌಡ್‌ಗೆ ಮಧ್ಯಪ್ರದೇಶ ಸರ್ಕಾರ ತಲಾ ಒಂದು ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಪ್ರಶಸ್ತಿ ಗೆದ್ದ ಭಾರತೀಯ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಅಮನ್‌ಜೋತ್ ಕೌರ್‌ಗೆ ಪಂಜಾಬ್ ಸರ್ಕಾರ ತಲಾ 11 ಲಕ್ಷ ರೂಪಾಯಿ ಮತ್ತು ಫೀಲ್ಡಿಂಗ್ ಕೋಚ್ ಮುನಿಶ್ ಬಾಲಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

error: Content is protected !!