ಹೊಸದಿಗಂತ ವರದಿ ಮಡಿಕೇರಿ:
ವಿಶ್ವ ಪರಿಸರ ದಿನದ ಅಂಗವಾಗಿ ಬಿಜೆಪಿ ಮಡಿಕೇರಿ ನಗರ ಮಂಡಲದ ವತಿಯಿಂದ ಪರಿಸರ ದಿನವನ್ನು ಆಚರಿಸಲಾಯಿತು.
ಪರಿಸರ ದಿನಾಚರಣೆ ಕುರಿತಾಗಿ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿದರು.
ಮಡಿಕೇರಿ ನಗರ ಮಂಡಲದ ಅಧ್ಯಕ್ಷ ಮನು ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಜಿಲ್ಲಾ ಕಾರ್ಯದರ್ಶಿ ಎಸ್.ಸಿ.ಸತೀಶ್, ಮಡಿಕೇರಿ ನಗರ ಮಂಡಲದ ಉಪಾಧ್ಯಕ್ಷರಾದ ಬಿ.ಕೆ.ಜಗದೀಶ್, ಗಣೇಶ್ ಭಾಗಿಯಾಗಿದ್ದರು.
ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಗರದ ಇತಿಹಾಸ ಪ್ರಸಿದ್ದ ಶ್ರೀ ಓಂಕಾರೇಶ್ವರ ದೇವಾಲಯದ ಮುಂಭಾಗ ಗಿಡಗಳನ್ನು ನೆಡಲಾಯಿತು. ಇದೇ ಸಂದರ್ಭ ನಗರದ ವಿವಿಧ ಮೋರ್ಚಾಗಳ ವತಿಯಿಂದ ವಿವಿಧ ಭಾಗಗಳಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.