ಇಂದು ಆರಂಭವಾಗಲಿದೆ ವಿಶ್ವ ವಿಖ್ಯಾತ ಹಂಪಿ ಉತ್ಸವ : ಸಿಎಂ ಬೊಮ್ಮಾಯಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಹಂಪಿಯಲ್ಲಿ ಇಂದಿನಿಂದ ಹಂಪಿ ಉತ್ಸವ ಆರಂಭವಾಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

Hampi Tourism UNESCO World Heritage | Virupaksha Temple Karnatakaಇಂದಿನಿಂದ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ಸಂಜೆ 5:30ಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಿದ್ದು, ಹಂಪಿಯ ಎಲ್ಲಾ ಸ್ಮಾರಕಗಳು ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ.

Hampi Tourism (2023) - India > Top Things To Do, Reviews | Holidifyಉತ್ಸವಕ್ಕೆ ನಾಲ್ಕು ವೇದಿಕೆಗಳನ್ನು ತಯಾರು ಮಾಡಲಾಗಿದ್ದು, ಬಾಲಿವುಡ್, ಸ್ಯಾಂಡಲ್‌ವುಡ್‌ನ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಒಟ್ಟಾರೆ ಆರು ಸಾವಿರಕ್ಕೂ ಹೆಚ್ಚು ಕಲಾವಿದರು ಪ್ರದರ್ಶನ ನೀಡಲಿದ್ದು, ಕಣ್ತುಂಬಿಕೊಳ್ಳಲು ಪ್ರವಾಸಿಗರು ಕಾತರರಾಗಿದ್ದಾರೆ.

Hampi – India For Beginnersಉತ್ಸವಕ್ಕೆ ಒಟ್ಟಾರೆ ಒಂಬತ್ತು ಲಕ್ಷ ಜನ ಆಗಮಿಸುವ ನಿರೀಕ್ಷೆ ಇದ್ದು, ಸಕಲ ಸಿದ್ಧತೆ ನೆರವೇರಿಸಲಾಗಿದೆ. ಉತ್ಸವಕ್ಕೆ 15 ಕೋಟಿ ರೂಪಾಯಿ ವೆಚ್ಚವಾಗಲಿದೆ, ಜಲಕ್ರೀಡೆ, ನೃತ್ಯ, ಆಹಾರ ಮೇಳ, ಕುಸ್ತಿ, ಫಲಪುಷ್ಪ ಪ್ರದರ್ಶನ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

This magnificent retreat in Hampi blends historical elegance and modern  luxury | Architectural Digest Indiaಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಆನಂದ್ ಸಿಂಗ್, ಶ್ರೀರಾಮುಲು ಸೇರಿ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!