ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ.
ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ, ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಬಾಗಿಲನ್ನು ತೆರೆಯಲಾಯಿತು. ಎರಡು ಕಡೆಯ ಪೂಜೆಗಾಗಿ ಪೂಜಾ ಸಾಮಾಗ್ರಿ, ಒಡವೆ, ದೇವಿಯ ಅಲಂಕಾರ ಸಾಮಾಗ್ರಿಗಳೊಂದಿಗೆ ಮುತ್ತೈದೆಯರ ಜೊತೆಗೆ ದೇಗುಲಕ್ಕೆ ಪ್ರವೇಶ ಮಾಡಲಾಯಿತು. ಗರ್ಭಗುಡಿ ಬಾಗಿಲು ತೆರೆಯುವ ಮೊದಲು ಗರ್ಭಗುಡಿ ಬಾಗಿಲಿಗೆ ಪೂಜೆ ಮಾಡಲಾಯಿತು.
ಆಶ್ವೀಜ ಮಾಸದ ಮೊದಲ ದಿನವಾದ ಇಂದು ಶಾಸ್ತ್ರೋಕ್ತವಾಗಿ ದೇವಿಯ ಗುಡಿಯ ಬಾಗಿಲು ತೆರೆದಿದ್ದು, ನ.3ರ ಬೆಳಗ್ಗೆವರೆಗೆ ದೇವಿ ದರುಶನಕ್ಕೆ ಅವಕಾಶವಿದೆ. ಇದೇ ದಿನದಂದು ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದೆ.
ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ದಿನದ 24 ಗಂಟೆಯೂ ದೇವಿಯ ದರುಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಳೆ-ಬಿಸಿಲಿನಿಂದ ಭಕ್ತರು ಆಶ್ರಯ ಪಡೆಯಲು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ.