ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿಖ್ಯಾತ ಮೈಸೂರು ದಸರಾ 2025ರ ಅಧಿಕೃತ ಕಾರ್ಯಕ್ರಮ ಇಂದು ಶುರುವಾಗಿದೆ. ದಸರಾಗಾಗಿ ಕ್ಯಾಪ್ಟನ್ ಅಭಿಮನ್ಯು ಟೀಂ ಕಾಡಿನಿಂದ ನಾಡಿಗೆ ಆಗಮಿಸಿದ್ದು, ಆನೆಗಳ ಮೊದಲ ತಂಡಕ್ಕೆ ಹೆಚ್.ಡಿ ಕೋಟೆಯ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು.
ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು (ಆ.4) ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಈ ಬಾರಿಯೂ 750 ಕೆ.ಜಿ ತೂಕದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು, ಇಡೀ ತಂಡವನ್ನು ಮುನ್ನಡೆಸಲಿದ್ದಾನೆ.
ನಾಳೆ ಒಂದು ದಿನ ಮೈಸೂರಿನಲ್ಲಿ ವಿಶ್ರಾಂತಿ ಪಡೆಯಲಿರುವ ಗಜಪಡೆ ಆ.7ರಂದು ಅರಮನೆ ಪ್ರವೇಶ ಮಾಡಲಿವೆ.