ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಅಕ್ಟೋಬರ್ 3 ರಂದು ಬೆಳಿಗ್ಗೆ 9.15 ರಿಂದ 9.45 ರವರೆಗೆ ಚಾಮುಂಡಿಬೆಟ್ಟದಲ್ಲಿ ವೃಶ್ಚಿಕ ಲಗ್ನದಲ್ಲಿ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 3 ರಿಂದ 11 ರವರೆಗೆ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12 ರ ಶನಿವಾರದಂದು ಜಂಬೂ ಸವಾರಿ ನಡೆಯುತ್ತದೆ. ಮಧ್ಯಾಹ್ನ 1:41 ರಿಂದ 2:10 ರವರೆಗೆ ಮಕರ ಲಗ್ನದಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆಯು ಸಂಜೆ 4:00 ರಿಂದ 4:30 ರವರೆಗೆ ಪ್ರಾರಂಭವಾಗುತ್ತದೆ.

ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್​ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!