August 27, 2026
Thursday, August 27, 2026
spot_img

ವಿಶ್ವ ಜಲ ದಿನ | ಪ್ರತಿ ಹನಿ ನೀರನ್ನು ಸಂರಕ್ಷಿಸಲು ಬದ್ಧರಾಗೋಣ: ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವ ಜಲ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀರಿನ ಮಹತ್ವವನ್ನು ಒತ್ತಿಹೇಳಿ, ಪ್ರತಿಯೊಬ್ಬರೂ ನೀರನ್ನು ಸಂರಕ್ಷಿಸುವ ಸಂಕಲ್ಪಕ್ಕೆ ಬದ್ಧರಾಗಬೇಕು ಎಂದು ಕರೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡ ಅವರು, ನೀರು ನಮ್ಮ ಬದುಕಿನ ಆಧಾರವಾಗಿದ್ದು, ಭೂಮಿಯ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವ ಜಲ ದಿನದಂದು, ಪ್ರತಿ ಹನಿ ನೀರನ್ನು ಸಂರಕ್ಷಿಸಲು ಮತ್ತು ಅದನ್ನು ಜವಾಬ್ದಾರಿಯುತವಾಗಿ ಬಳಸಲು ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಇದೇ ವೇಳೆ, ಜಲಶಕ್ತಿ ಸಚಿವಾಲಯ ದೇಶದ ಮಟ್ಟದಲ್ಲಿ ಜಲ ಸಂರಕ್ಷಣೆಗೆ ಉತ್ತೇಜನ ನೀಡುವ ಹಲವು ಕಾರ್ಯಕ್ರಮಗಳನ್ನು ಘೋಷಿಸಿದೆ. ಶುದ್ಧ ನೀರಿನ ಅಗತ್ಯತೆ, ಹವಾಮಾನ ಬದಲಾವಣೆ ಮತ್ತು ನೀರಿನ ಸಮಾನ ಹಂಚಿಕೆಯ ಸವಾಲುಗಳನ್ನು ನಮಗೆ ನೆನಪಿಸುತ್ತದೆ ಎಂದು ಸಚಿವಾಲಯ ಹೇಳಿದೆ. ಈ ವರ್ಷದ ಧ್ಯೇಯ “Water and Gender” ಆಗಿದ್ದು, ಸಮಾನ ಜಲ ನಿರ್ವಹಣೆಯ ಅಗತ್ಯವನ್ನು ಒತ್ತಿಹೇಳುತ್ತದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !