ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನಲ್ಲಿ ಮೂರು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ವನ್ಯಜೀವಿ ದಿನದ ಹಿನ್ನೆಲೆಯಲ್ಲಿ ಇಂದು ಜುನಾಗಢ ಜಿಲ್ಲೆಯ ಗಿರ್ ವನ್ಯಜೀವಿ ಅಭಯಾರಣ್ಯದಲ್ಲಿ ಸಿಂಹ ಸಫಾರಿಯಲ್ಲಿ ಪಾಲ್ಗೊಂಡರು.
ಸಿಂಹ ಸಫಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕ್ಯಾಮರ ಕಣ್ಣಲ್ಲಿ ಸಿಂಹ, ಆನೆ, ಹುಲಿ ಸೇರಿದಂತೆ ವಿವಿಧ ಪ್ರಾಣಿಗಳ ಭಾವ ಚಿತ್ರ ಸೆರೆ ಹಿಡಿದರು. ಪ್ರಧಾನಿ ಅವರು ಗುಜರಾತ್ ಸರ್ಕಾರದ ಕೆಲವು ಸಚಿವರು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಂಹ ಸದನದಿಂದ ಸಿಂಹ ಸಫಾರಿಗೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸಿದರು.