ಹೊಸದಿಗಂತ ಡಿಜಿಟಲ್ ಡೆಸ್ಕ್ :
ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಕಡಿಮೆ ಸಮಯದಲ್ಲಿ ದರ್ಶನ ಸಿಗಬೇಕು ಎನ್ನುವ ಉದ್ದೇಶದಿಂದ ಎಐ ಆಧಾರಿತ ಸೌಲಭ್ಯ ತರಲು ದೇವಸ್ಥಾನದ ಆಡಳಿತ ಮಂಡಳಿ ಗೂಗಲ್ ಇಂಕ್ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಈ ಮೂಲಕ ವಿಶ್ವದ ಮೊದಲ ಹಿಂದೂ ದೇವಸ್ಥಾನವೆಂಬ ಖ್ಯಾತಿಗೆ ಟಿಟಿಡಿ ಪಾತ್ರವಾಗಲಿದೆ.
ಸೋಮವಾರ ತಿರುಮಲದಲ್ಲಿ ನಡೆದ ಟಿಟಿಡಿ ಟ್ರಸ್ಟ್ ಮಂಡಳಿಯ ಸಭೆಯ ನಂತರ ಸುದ್ದಿಗಾರರೊಂದಿಗೆ ಟಿಟಿಡಿ ಅಧ್ಯಕ್ಷ ಬಿಆರ್ ನಾಯ್ಡು ಮಾತನಾಡಿ, ಈ ಒಪ್ಪಂದದ ಮೂಲಕ ಆಕರ್ಷಕ ಕೃತಕ ಬುದ್ಧಿಮತ್ತೆ ಸಂಯೋಜಿತ ಯಾತ್ರಾ ಸೇವೆಗಳನ್ನು ತರಲು ಆಡಳಿತ ಮಂಡಳಿ ನಿರ್ಧರಿಸಿದೆ. ಜೊತೆಗೆ ಭಕ್ತರಿಗೆ ತೊಂದರೆಯಾಗದಂತೆ ಯಾತ್ರೆ ಕೈಗೊಳ್ಳಲು ತಿರುಮಲದಲ್ಲಿ ಎಐ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.