ದಕ್ಷಿಣ ಚೀನಾ ಸಮುದ್ರದಲ್ಲಿ ಜಗತ್ತಿನ ಅತಿ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಚೀನಾ ಸಮುದ್ರದಲ್ಲಿ ವಿಶ್ವದ ಅತಿ ದೊಡ್ಡ ನೈಸರ್ಗಿಕ ಅನಿಲ ನಿಕ್ಷೇಪವನ್ನು ಪತ್ತೆ ಮಾಡಿದೆ ಎಂದು ಚೀನಾ ಹೇಳಿದೆ.

ದಕ್ಷಿಣ ಚೀನಾ ಸಮುದ್ರದ ವಿಚಾರದಲ್ಲಿ ಅನೇಕ ದೇಶಗಳು ಈಗಾಗಲೇ ಮಿಲಿಟರಿ ಮತ್ತು ರಾಜತಾಂತ್ರಿಕ ಸಂಘರ್ಷಗಳನ್ನು ಹೊಂದಿವೆ. ಅನಿಲ ನಿಕ್ಷೇಪಗಳು ಪತ್ತೆಯಾದ ನಂತರ, ಈ ಸ್ಪರ್ಧೆಯು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

ಚೀನಾ ನ್ಯಾಷನಲ್ ಪೆಟ್ರೋಲಿಯಂ ಕಾರ್ಪೊರೇಶನ್ ಡೇಟಾವನ್ನು ತಿಳಿಸಿದ್ದು ಸಂಬಂಧಿತ ಸರ್ಕಾರಿ ಅಧಿಕಾರಿಗಳು ಅನುಮೋದಿಸಿದ್ದಾರೆ ಎಂದು ಹೇಳಿದೆ.

ಈ ಅನಿಲ ನಿಕ್ಷೇಪ ಇರುವ ಪ್ರದೇಶವು ದಕ್ಷಿಣ ಚೀನಾ ಸಮುದ್ರದ ವಿವಾದಿತ ಪ್ರದೇಶದ ಭಾಗವಾಗಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಒದಗಿಸಲಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!