ಜಗತ್ತಿನಲ್ಲಿ ಕಾಂಡೋಮ್‌ ಬಳಕೆ ಕಡಿಮೆ ಆಗಿದೆ, ವಿಶ್ವ ಆರೋಗ್ಯ ಸಂಸ್ಥೆ ಕಳವಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಲೈಂಗಿಕ ಸುರಕ್ಷತೆ ಬಗ್ಗೆ ಜಗತ್ತಿನಲ್ಲಿ ಎಷ್ಟೇ ಪಾಠ ಹೇಳಿಕೊಟ್ಟರೂ ಜನರು ಅದನ್ನು ಬಳಕೆ ಮಾಡುವಂತೆ ಕಾಣುತ್ತಿಲ್ಲ. ಅದರಲ್ಲೂ ಯಂಗ್‌ಸ್ಟರ್ಸ್‌ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ.

ಹದಿಹರೆಯದವರಲ್ಲಿ ಕಾಂಡೋಮ್ ಅಥವಾ ಗರ್ಭನಿರೋಧಕ ಮಾತ್ರೆಗಳ ಬಳಕೆ ಕಡಿಮೆಯಾಗುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ, ಇದು ಕಳವಳಕಾರಿ ಸಂಗತಿಯಾಗಿದೆ. ಐರೋಪ್ಯ ರಾಷ್ಟ್ರಗಳಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ಹುಡುಗರು ಮತ್ತು ಹುಡುಗಿಯರು ಲೈಂಗಿಕ ಸಂಭೋಗದ ಸಮಯದಲ್ಲಿ ಕಾಂಡೋಮ್ ಅಥವಾ ಜನನ ನಿಯಂತ್ರಣ ಮಾತ್ರೆಗಳನ್ನು ಬಳಸುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ವರದಿ ಹೇಳಿದೆ. 2018 ರಿಂದ ಈ ಅಭ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ. ಇದು ದೀರ್ಘಕಾಲದ ಕಾಯಿಲೆಗಳ ಜೊತೆಗೆ ಅನಗತ್ಯ ಗರ್ಭಧಾರಣೆಯ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ವರದಿಯಲ್ಲಿ ಬಹಿರಂಗಪಡಿಸಲಾಗಿದೆ.

ಸಮೀಕ್ಷೆಯ ಭಾಗವಾಗಿ, ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ 42 ದೇಶಗಳಲ್ಲಿ ಸಮೀಕ್ಷೆಯನ್ನು ನಡೆಸಲಾಯಿತು. ಇದರಲ್ಲಿ 15 ವರ್ಷ ವಯಸ್ಸಿನ 2,42,000 ಹದಿಹರೆಯದವರು ಭಾಗವಹಿಸಿದ್ದರು. 2014ರಲ್ಲಿ ಕಾಂಡೋಮ್ ಬಳಸುವವರ ಸಂಖ್ಯೆ ಶೇ. 70ರಷ್ಟಿತ್ತು, ಆದರೆ ಇತ್ತೀಚಿನ ವರದಿ ಪ್ರಕಾರ ಆ ಸಂಖ್ಯೆ ಶೇ. 61ಕ್ಕೆ ಇಳಿದಿದೆ. ಮಹಿಳೆಯರಿಗೆ ಸಂಬಂಧಿಸಿದಂತೆ, ಕಾಂಡೋಮ್ ಅಥವಾ ಗರ್ಭನಿರೋಧಕ ಮಾತ್ರೆಗಳನ್ನು ಬಳಸುವ ಅವರ ಸಂಖ್ಯೆಯು 63 ಪ್ರತಿಶತದಿಂದ 57 ಪ್ರತಿಶತಕ್ಕೆ ಕಡಿಮೆಯಾಗಿದೆ. ಇದರರ್ಥ ಹದಿಹರೆಯದವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಲೈಂಗಿಕ ಕ್ರಿಯೆಯಲ್ಲಿ ಕಾಂಡೋಮ್ಗಳನ್ನು ಬಳಸುತ್ತಿಲ್ಲ.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!