ಹೊಸದಿಗಂತ ವರದಿ, ಕೊಪ್ಪಳ:
ಕನಕಗಿರಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ರಾತ್ರಿಯೇ ಊಟದಲ್ಲಿ ಹುಳು ಕಾಣಿಸಿಕೊಂಡಿದ್ದವೆನ್ನಲಾಗಿದೆ. ಹೀಗಾಗಿ ಕೆಲ ವಿದ್ಯಾರ್ಥಿನಿರು ಊಟ ಬಿಟ್ಟಿದ್ದಾರೆ. ಕೆಲವರು ರಾತ್ರಿಯೇ ವಾಂತಿ ಭೇದಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆಯೂ ಕೆಲ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಡುಗೆ ಅಸ್ವಸ್ಥತೆಯಿಂದ ಕೂಡಿದ್ದು ಸಮಸ್ಯೆಗೆ ಕಾರಣ ಎನ್ನಲಾಗಿದೆ. ವಿಷಯ ತಿಳಿದು ಪಾಲಕರು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಧಾವಿಸಿದ್ದು ಅಡಿಗೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ