ಪೊಲೀಸರಿಗೆ ನೀಡುವ ಆಹಾರದಲ್ಲಿ ಹುಳ ಪತ್ತೆ, ಖಾಸಗಿ ಕಂಪನಿ ಗುತ್ತಿಗೆ ರದ್ದು, ಇನ್ಮುಂದೆ ಇಸ್ಕಾನ್‌ ಊಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏರೋ ಇಂಡಿಯಾ 2025ರ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇದೀಗ ಸರ್ಕಾರ ಇಸ್ಕಾನ್ ಸಂಸ್ಥೆಗೆ ವಹಿಸಿದೆ.

ಏರ್ ಶೋ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆ ಆಗುತ್ತಿರುವ ಪ್ರಕರಣ ಮರುಕಳಿಸಿದ ಬೆನ್ನಲ್ಲೇ ಸರ್ಕಾರ ಈ ಕ್ರಮ ಕೈಗೊಂಡಿದೆ.

ಏರ್ ಶೋ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಸೋಮವಾರ ನೀಡಿದ್ದ ಆಹಾರದಲ್ಲಿ ಹುಳ ಪತ್ತೆಯಾಗಿತ್ತು. ಈ ವಿಚಾರವಾಗಿ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಆಹಾರ ಪೂರೈಕೆಗೆ ಖಾಸಗಿ ಸಂಸ್ಥೆಗೆ ನೀಡಿದ್ದ ಗುತ್ತಿಗೆಯನ್ನು ಸರ್ಕಾರ ರದ್ದುಪಡಿಸಿದೆ.

ಪೊಲೀಸರಿಗೆ ಆಹಾರ ಒದಗಿಸುವ ಗುತ್ತಿಗೆಯನ್ನು ಎಂಬ ಖಾಸಗಿ ಕಂಪನಿಯೊಂದಕ್ಕೆ ವಹಿಸಲಾಗಿತ್ತು. ಈ ಕಂಪನಿ ಪೂರೈಸಿದ್ದ ಆಹಾರದಲ್ಲಿ ಜಿರಳೆ, ಹುಳ ಪತ್ತೆಯಾಗಿದ್ದವು. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಆಡಳಿತಕ್ಕೆ ಇರಿಸುಮುರಿಸು ಆಗಿದ್ದಲ್ಲದೆ, ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!