ಲತಾ ಮಂಗೇಶ್ಕರ್ ಹೆಸರಿನಲ್ಲಿ ಪೂಜೆ ಸಲ್ಲಿಸುತ್ತಿದ್ದೇವೆ: ಆಶಾ ಭೋಸ್ಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಡೀ ದೇಶವೇ ಲತಾ ಅವರು ಗುಣಮುಖರಾಗಿ ವಾಪಾಸಾಗಲಿ ಎಂದು ಆಶಿಸುತ್ತಿದೆ.
ಲತಾ ಅವರ ಆರೋಗ್ಯದಲ್ಲಿ ಚೇತರಿಕೆ ಇದೆ, ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಲತಾ ಅವರ ಸಹೋದರಿ ಹಿರಿಯ ಗಾಯಕಿ ಆಶಾ ಭೋಸ್ಲೆ ಈ ಬಗ್ಗೆ ಮಾತನಾಡಿದ್ದು, ಲತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ. ನಾವು ಮನೆಯಲ್ಲಿ ಅವರ ಆರೋಗ್ಯಕ್ಕಾಗಿ ಪೂಜೆ ಸಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!