Wednesday, June 7, 2023

Latest Posts

ಬಸವೇಶ್ವರರಿಗೆ ನಮಿಸಿ, ಸಮಾನತೆ ಸಂದೇಶ ನೆನೆದ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಾದ್ಯಂತ ಇಂದು ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗಿದ್ದು, ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನದಲ್ಲಿ ಕೂಡ ಆಚರಣೆ ಮಾಡಲಾಯಿತು.

ಈ ವೇಳೆ ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕು.ಶೋಭಾ ಕರಂದ್ಲಾಜೆ, ಬಸವೇಶ್ವರರು ಸಮಾಜದಲ್ಲಿ ಜಾತಿ-ಮತ ಭೇದವಿಲ್ಲದೆ, ಎಲ್ಲರೂ ಸಮಾನರು ಎಂಬ ಸಂದೇಶವನ್ನು ಭಾರತವಲ್ಲದೆ ವಿಶ್ವಕ್ಕೆ ಪಸರಿಸಿದರು. ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಅವರ ಹಾದಿಯಲ್ಲಿ ಬಿಜೆಪಿ ಸಾಗುತ್ತಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!