WPL 2025 | RCB ತಂಡದಿಂದ ಟಗರು ಪುಟ್ಟಿ ಖ್ಯಾತಿಯ ಸ್ಟಾರ್ ಆಟಗಾರ್ತಿ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-3 ಅನ್ನು ಭರ್ಜರಿಯಾಗಿ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಗಾಯದಿಂದ ಬಳಲುತ್ತಿದ್ದು, ಅವರು ಈ ಬಾರಿಯ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.

ಇದಕ್ಕೆ ಕಾರಣ ಗಾಯದ ಸಮಸ್ಯೆ ಎಂದು ತಿಳಿದು ಬಂದಿದೆ. ಈ ಗಾಯದ ಸಮಸ್ಯೆಯ ಕಾರಣ ಅವರು ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಮೊಣಕಾಲಿನ ಗಾಯದ ಸಮಸ್ಯೆಯ ಕಾರಣ ಶ್ರೇಯಾಂಕಾ ಪಾಟೀಲ್ 2024ರ ಮಹಿಳಾ ಟಿ20 ವಿಶ್ವಕಪ್ ನಂತರ ಯಾವುದೇ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಲ್ಲ. ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾದರೂ ಶ್ರೇಯಾಂಕಾ ಕಾಣಿಸಿಕೊಂಡಿಲ್ಲ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!