ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ.
ಟಾಸ್ ಗೆದ್ದ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಉಭಯ ತಂಡಗಳು
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜಿ ಕಮಲಿನಿ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ನಿಕೋಲಾ ಕ್ಯಾರಿ, ಪೂನಮ್ ಖೇಮ್ನಾರ್, ಶಬ್ನಿಮ್ ಇಸ್ಮಾಯಿಲ್, ಸಂಸ್ಕೃತಿ ಗುಪ್ತಾ, ಸಜನಾ ಸಜೀವನ್ ಮತ್ತು ಸೈಕಾ ಇಶಾಕ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ದಯಾಲನ್ ಹೇಮಲತಾ, ರಿಚಾ ಘೋಷ್ (ವಿಕೆಟ್ ಕೀಪರ್), ರಾಧಾ ಯಾದವ್, ನಡಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಪ್ರೇಮಾ ರಾವತ್, ಲಿನ್ಸೆ ಸ್ಮಿತ್ ಮತ್ತು ಲಾರೆನ್ ಬೆಲ್.

