February 2, 2026
Monday, February 2, 2026
spot_img

WPL 2026: ಮುಂಬೈ ಕನಸು ನುಚ್ಚುನೂರು: ಪ್ಲೇ ಆಫ್ ಪ್ರವೇಶಿಸಿದ ಡೆಲ್ಲಿ ಕ್ಯಾಪಿಟಲ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಎಲಿಮಿನೇಟರ್ (ಪ್ಲೇ ಆಫ್) ಸುತ್ತಿಗೆ ಪ್ರವೇಶಿಸಿದೆ. ಈ ಫಲಿತಾಂಶದೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಕನಸು ಲೀಗ್ ಹಂತದಲ್ಲೇ ಅಂತ್ಯ ಕಂಡಿದೆ.

ಕೋಟಂಬಿ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಯುಪಿ ವಾರಿಯರ್ಸ್ 20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 122 ರನ್ ಗಳಿಸಿತು. ದೀಪ್ತಿ ಶರ್ಮಾ 24 ರನ್‌ಗಳೊಂದಿಗೆ ಗರಿಷ್ಠ ಸ್ಕೋರ್ ಮಾಡಿದರೆ, ಸಿಮ್ರಾನ್ ಶೇಖ್ 22 ಹಾಗೂ ಶಿಖಾ ಪಾಂಡೆ 23 ರನ್‌ಗಳ ಕೊಡುಗೆ ನೀಡಿದರು. ಆದರೆ ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಕಾಣಿಸಲಿಲ್ಲ.

ಇದನ್ನೂ ಓದಿ:

ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್, ವೋಲ್ವಾರ್ಡ್ ಅವರ 47 ರನ್‌ಗಳ ಆಕ್ರಮಣಕಾರಿ ಇನ್ನಿಂಗ್ಸ್ ಮತ್ತು ನಾಯಕಿ ಜೆಮಿಮಾ ರೊಡ್ರಿಗಸ್ ಅವರ ಅಜೇಯ 34 ರನ್‌ಗಳ ನೆರವಿನಿಂದ 18.4 ಓವರ್‌ಗಳಲ್ಲಿ 126 ರನ್ ಗಳಿಸಿ ಗೆಲುವು ತನ್ನದಾಗಿಸಿಕೊಂಡಿತು.

ಈ ಗೆಲುವಿನಿಂದ ಡೆಲ್ಲಿ ತಂಡ ಗುಜರಾತ್ ಜೈಂಟ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯ ಆಡಲಿದೆ. ಈ ಪಂದ್ಯ ಫೆಬ್ರವರಿ 3ರಂದು ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಫೆಬ್ರವರಿ 5ರಂದು ನಡೆಯುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ವಿಜೇತರನ್ನು ಎದುರಿಸಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !