February 24, 2026
Tuesday, February 24, 2026
spot_img

WPL 2026: ಆರ್‌ಸಿಬಿ–ಮುಂಬೈ ಮುಖಾಮುಖಿ: ಯಾರ ಜೋಳಿಗೆ ಸೇರಲಿದೆ ‘ಫೈನಲ್’ ಅಸ್ತ್ರ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಡೋದರದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026ರ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮಹತ್ವದ ಸಮರಕ್ಕೆ ಇಳಿದಿವೆ. ಈ ಪಂದ್ಯ ಎರಡೂ ತಂಡಗಳಿಗೆ ಅತ್ಯಂತ ನಿರ್ಣಾಯಕವಾಗಿದ್ದು, ಫಲಿತಾಂಶವು ನೇರವಾಗಿ ಟೂರ್ನಿಯ ಮುಂದಿನ ಹಂತದ ಚಿತ್ರಣವನ್ನು ಬದಲಾಯಿಸಲಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇದುವರೆಗೆ ನಡೆದಿರುವ ಪಂದ್ಯಗಳಲ್ಲಿ ಟಾಸ್ ಗೆದ್ದ ಎಲ್ಲರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈಗಾಗಲೇ ಆರು ಪಂದ್ಯಗಳನ್ನು ಆಡಿರುವ ಆರ್‌ಸಿಬಿ ಐದು ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸಿದರೆ ನೇರವಾಗಿ ಫೈನಲ್ ಟಿಕೆಟ್ ಖಚಿತವಾಗಲಿದೆ. ಇತ್ತ ಮುಂಬೈ ಇಂಡಿಯನ್ಸ್ ಕೇವಲ ಎರಡು ಗೆಲುವುಗಳೊಂದಿಗೆ ಸಂಕಷ್ಟದಲ್ಲಿದ್ದು, ಈ ಪಂದ್ಯದಲ್ಲಿ ಸೋತರೆ ಪ್ಲೇಆಫ್ ಆಸೆ ಬಿಡಬೇಕಾಗುತ್ತದೆ.

ಇನ್ನು ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮುಂಬೈ ಇಂಡಿಯನ್ಸ್ ಮಾತ್ರ ಒಂದೇ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಆರ್‌ಸಿಬಿ ಪರ ಗ್ರೇಸ್ ಹ್ಯಾರಿಸ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್ ಪ್ರಮುಖರಾಗಿದ್ದರೆ, ಮುಂಬೈ ಪರ ಹೇಲಿ ಮ್ಯಾಥ್ಯೂಸ್, ನ್ಯಾಟ್ ಸ್ಕಿವರ್-ಬ್ರಂಟ್ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೇಲಿನ ನಿರೀಕ್ಷೆ ಹೆಚ್ಚಿದೆ.

ಒಟ್ಟಾರೆ, ಫೈನಲ್ ಮತ್ತು ಪ್ಲೇಆಫ್ ಭವಿಷ್ಯ ನಿರ್ಧರಿಸುವ ಈ ಪಂದ್ಯ ಈಗಾಗಲೇ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !