January 30, 2026
Friday, January 30, 2026
spot_img

WPL 2026 | ಹ್ಯಾರಿಸ್, ಮಂಧಾನ ಅಬ್ಬರಕ್ಕೆ ಯುಪಿ ತತ್ತರ: ಭರ್ಜರಿ ಗೆಲುವಿನೊಂದಿಗೆ RCB ಫೈನಲ್‌ ಎಂಟ್ರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 18ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯುಪಿ ವಾರಿಯರ್ಸ್ ವಿರುದ್ಧ ಏಕಪಕ್ಷೀಯ ಜಯ ಸಾಧಿಸಿ ನೇರವಾಗಿ ಫೈನಲ್‌ಗೆ ಪ್ರವೇಶಿಸಿದೆ. ಈ ಸೋಲಿನೊಂದಿಗೆ ಯುಪಿ ವಾರಿಯರ್ಸ್ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ ಹೊರಬಿದ್ದ ಮೊದಲ ತಂಡವಾಗಿದ್ದು, ಗೆಲ್ಲಲೇಬೇಕಾದ ಪಂದ್ಯದಲ್ಲಿ ನಿರೀಕ್ಷೆಗೂ ತಲುಪಲಿಲ್ಲ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ, ಯುಪಿ ವಾರಿಯರ್ಸ್ ತಂಡವನ್ನು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್‌ಗಳಿಗೆ ನಿಯಂತ್ರಿಸಿತು. ಯುಪಿ ಪರ ನಾಯಕಿ ಮೇಗ್ ಲ್ಯಾನಿಂಗ್ 41 ರನ್ ಗಳಿಸಿದರೆ, ದೀಪ್ತಿ ಶರ್ಮಾ 55 ರನ್‌ಗಳೊಂದಿಗೆ ತಂಡಕ್ಕೆ ಆಸರೆಯಾದರು. ಆದರೆ ಇತರ ಬ್ಯಾಟರ್‌ಗಳು ದೊಡ್ಡ ಮೊತ್ತ ಕಟ್ಟಲು ವಿಫಲರಾದರು.

ಇದನ್ನೂ ಓದಿ:

ಗುರಿ ಬೆನ್ನಟ್ಟಿದ ಆರ್‌ಸಿಬಿ ಆರಂಭದಿಂದಲೇ ಪ್ರಭಾವಶಾಲಿ ಆಟವಾಡಿತು. ಗ್ರೇಸ್ ಹ್ಯಾರಿಸ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ 75 ರನ್ ಬಾರಿಸಿದರೆ, ನಾಯಕಿ ಸ್ಮೃತಿ ಮಂಧಾನ ಅಜೇಯ ಅರ್ಧಶತಕದೊಂದಿಗೆ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಈ ಜೋಡಿ ಮೊದಲ ವಿಕೆಟ್‌ಗೆ 108 ರನ್‌ಗಳ ಜೊತೆಯಾಟ ನೀಡಿತು. ಅಂತಿಮವಾಗಿ ಆರ್‌ಸಿಬಿ ಕೇವಲ 13.1 ಓವರ್‌ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಈ ಫಲಿತಾಂಶದೊಂದಿಗೆ ಆರ್‌ಸಿಬಿ ಫೈನಲ್ ಸ್ಥಾನ ಖಚಿತಪಡಿಸಿಕೊಂಡಿದ್ದು, ಉಳಿದ ಎರಡು ಪ್ಲೇಆಫ್ ಸ್ಥಾನಗಳಿಗಾಗಿ ಲೀಗ್ ಹಂತದ ಕೊನೆಯ ಪಂದ್ಯಗಳು ರೋಚಕತೆಯನ್ನು ಹೆಚ್ಚಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !