WPL | ಎಲ್ಲಿಸ್ ಪೆರ್ರಿ ಭರ್ಜರಿ ಬ್ಯಾಟಿಂಗ್​: ಮೈದಾನದಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಪೀಸ್ ಪೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೋಮವಾರ ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪ್ಲೇಯರ್ ಎಲ್ಲಿಸ್ ಪೆರ್ರಿ ಬಾರಿಸಿದ ಆಕರ್ಷಕ ಸಿಕ್ಸರ್ ಗೆ ಮೈದಾನದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಗ್ಲಾಸ್ ಗೆ ಚೆಂಡು ಹೊಡೆದು ಗ್ಲಾಸ್ ಪೂರ್ತಿ ಪೀಸ್ ಪೀಸ್ ಆಗಿದೆ.

18.5 ಓವರ್ ನಲ್ಲಿ ಬ್ಯಾಟಿಂಗ್ ಮಾಡಿದ ಎಲ್ಲಿಸ್ ಪೆರ್ರಿ ಭರ್ಜರಿ ಸಿಕ್ಸ್ ಬಾರಿಸುವ ಮೂಲಕ ಚೆಂಡು ನೇರವಾಗಿ ಮೈದಾನದಲ್ಲಿ ನಿಲ್ಲಿಸಿದ್ದ ಕಾರಿನ ಕಿಟಕಿಗೆ ಬಡಿದು ಇದರಿಂದ ಕಾರಿನ ಗಾಜು ಒಡೆದಿದೆ. ಕೇವಲ 37 ಎಸೆತಗಳನ್ನು ಎದುರಿಸಿದ ಪೆರ್ರಿ ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳೊಂದಿಗೆ 58 ರನ್ ಗಳಿಸಿದರು. ಇದರಿಂದ ಕ್ರೀಡಾಂಗಣದಲ್ಲಿ ನೆರೆದಿದ್ದ ಆರ್​ಸಿಬಿ ಅಭಿಮಾನಿಗಳೆಲ್ಲ ಕುಣಿದು ಕುಪ್ಪಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!