February 1, 2026
Sunday, February 1, 2026
spot_img

WPL | ಮುಂಬೈಗೆ ಮೊದಲ ಸೋಲು ಕಟ್ಟಿ ಕೊಟ್ಟ ಗುಜರಾತ್: ಪ್ಲೇಆಫ್‌ಗೆ ಭರ್ಜರಿ ಎಂಟ್ರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಇತಿಹಾಸ ನಿರ್ಮಿಸಿದೆ. ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ 11 ರನ್‌ಗಳ ಗೆಲುವು ಸಾಧಿಸುವ ಮೂಲಕ ಗುಜರಾತ್ ಪ್ಲೇಆಫ್‌ಗೆ ಅಧಿಕೃತವಾಗಿ ಅರ್ಹತೆ ಪಡೆದಿದೆ. ಡಬ್ಲ್ಯುಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೂ ಗುಜರಾತ್ ಹೆಸರು ಸೇರಿಸಿಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಗುಜರಾತ್, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 167 ರನ್‌ಗಳ ಬಲವಾದ ಮೊತ್ತ ಕಲೆಹಾಕಿತು. ನಾಯಕಿ ಆಶ್ಲೇ ಗಾರ್ಡ್ನರ್ 46 ರನ್‌ಗಳೊಂದಿಗೆ ತಂಡದ ಟಾಪ್ ಸ್ಕೋರರ್ ಆಗಿದ್ದರೆ, ಜಾರ್ಜಿಯಾ ವೇರ್‌ಹ್ಯಾಮ್ ಅಜೇಯ 44 ರನ್‌ಗಳ ಕೊಡುಗೆ ನೀಡಿದರು. ಮುಂಬೈ ಪರ ಅಮೆಲಿಯಾ ಕೆರ್ ಎರಡು ವಿಕೆಟ್ ಪಡೆದು ಗಮನ ಸೆಳೆದರು.

ಇದನ್ನೂ ಓದಿ:

168 ರನ್‌ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಪ್ರಮುಖ ಬ್ಯಾಟರ್‌ಗಳ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡ ತಂಡ, 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 156 ರನ್‌ಗಳಷ್ಟೇ ಗಳಿಸಿತು. ಹರ್ಮನ್‌ಪ್ರೀತ್ ಕೌರ್ 82 ರನ್‌ಗಳ ಅಜೇಯ ಹೋರಾಟ ನಡೆಸಿದರೂ, ಗೆಲುವು ಸಾಧ್ಯವಾಗಲಿಲ್ಲ. ಗುಜರಾತ್ ಪರ ಸೋಫಿ ಡಿವೈನ್ ಮತ್ತು ಜಾರ್ಜಿಯಾ ವೇರ್‌ಹ್ಯಾಮ್ ತಲಾ ಎರಡು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಗುಜರಾತ್ ಮತ್ತು ಆರ್‌ಸಿಬಿ ಪ್ಲೇಆಫ್ ಸ್ಥಾನ ಭದ್ರಪಡಿಸಿಕೊಂಡಿದ್ದು, ಇನ್ನೊಂದು ಸ್ಥಾನಕ್ಕಾಗಿ ಮುಂಬೈ, ದೆಹಲಿ ಮತ್ತು ಯುಪಿ ತಂಡಗಳ ನಡುವೆ ಪೈಪೋಟಿ ಮುಂದುವರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !