ಇಂದಿನಿಂದ ಬೆಂಗಳೂರಿನಲ್ಲಿ WPLಮ್ಯಾಚ್‌: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ, ಮೆಟ್ರೋ ಸೇವೆ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದಿನಿಂದ ಮಾರ್ಚ್ 1ರವರೆಗೂ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯಗಳಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ಮುಂಬೈ ಇಂಡಿಯನ್ಸ್ ತಂಡ ಮಧ್ಯೆ ಹಣಾಹಣೆ ಇದೆ. ಪಂದ್ಯಗಳು ನಿಗದಿಯಾಗಿರುವ ದಿನಗಳಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳ ಸಂಚಾರದಲ್ಲಿ ಕೆಲ ಮಾರ್ಪಾಡುಗಳನ್ನ ಮಾಡಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.

ಮಹಿಳಾ ಪ್ರೀಯರ್ ಲೀಗ್ ಪಂದ್ಯಗಳು ನಿಗದಿಯಾಗಿರುವ ದಿನ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಕೆಲವೆಡೆ ವಾಹನಗಳ ಪಾರ್ಕಿಂಗ್​ಗೆ ನಿರ್ಬಂಧ ವಿಧಿಸಲಾಗಿದೆ. ಈ ಕೆಳಗಿನ ಸ್ಥಳಗಳಲ್ಲಿ ಪಾರ್ಕಿಂಗ್ ಇರಲ್ಲ.

ಕ್ವೀನ್ಸ್ ರಸ್ತೆ: ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ

ಎಂ.ಜಿ ರಸ್ತೆ: ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ರಸ್ತೆಯ ಎರಡೂ ಕಡೆ

ಲಿಂಕ್ ರಸ್ತೆ: ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ

ರಾಜಭವನ ರಸ್ತೆ: ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ

ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ

ಕಬ್ಬನ್‌ ರಸ್ತೆ: ಸಿಟಿಓ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್‌ನವರೆಗೆ ರಸ್ತೆಯ ಎರಡೂ ಕಡೆ. ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್‌ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರ ಎಲ್ಲಾ ತರಹದ ವಾಹನಗಳಿಗೆ ನಿರ್ಬಂಧ

ಸೆಂಟ್ ಮಾರ್ಕ್ಸ್ ರಸ್ತೆ: ಕ್ಯಾಶ್ ಫಾರ್ಮಸಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ

ಮ್ಯೂಸಿಯಂ ರಸ್ತೆ: ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆವರೆಗೆ ಹಾಗೂ ಆಶಿರ್ವಾದಂ ವೃತ್ತದವರೆಗೆ

ಕಸ್ತೂರಬಾ ರಸ್ತೆ: ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆ‌ರ್.ಆ‌ರ್.ಎಂ.ಆರ್ ವೃತ್ತದವರೆಗೆ

ಕಬ್ಬನ್ ಪಾರ್ಕ್ ಒಳಭಾಗದ ಕಿಂಗ್ ರಸ್ತೆ: ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಪೌಂಟೇನ್ ರಸ್ತೆಗಳಲ್ಲಿಲ್ಯಾವೆಲ್ಲೆ ರಸ್ತೆ: ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ

ವಿಠಲ್ ಮಲ್ಯ ರಸ್ತೆ: ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ ವಾಹನಗಳ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಇನ್ನು ಈ ಕೆಳಗಿನ ಸ್ಥಳಗಳಲ್ಲಿ ಪಾರ್ಕಿಂಗ್​ಗೆ ಅವಕಾಶ ಕಲ್ಪಿಸಲಾಗಿದೆ.

ಪಂದ್ಯ ವೀಕ್ಷಿಸಲು ಬರುವ ಸಾರ್ವಜನಿಕರು ವಾಹನಗಳನ್ನು ಸೆಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ ಮತ್ತು ಯುಬಿ ಸಿಟಿಯ ಪಾರ್ಕಿಂಗ್ ಸ್ಥಳದಲ್ಲಿ, ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ, ಕೆಎಸ್ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ (ಯೂರೋಪಿಯನ್) ಬಾಲಕರ ಶಾಲೆ ಮೈದಾನ (ಮ್ಯೂಸಿಯಂ ರಸ್ತೆ) ದಲ್ಲಿ ನಿಲುಗಡೆ ಮಾಡಬಹುದು.

ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆ ಸ್ಥಳದ ಕೊರತೆ ಇರುವುದರಿಂದ ಹಾಗೂ ಕ್ರೀಡಾಂಗಣ ಸುತ್ತ ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ಪಂದ್ಯ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ (ಬಿಎಂಟಿಸಿ) ವಾಹನಗಳನ್ನು ಹಾಗೂ ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ. ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿ ವಾಹನಗಳನ್ನು ಕಬ್ಬನ್‌ ಪಾರ್ಕ್ ಒಳಭಾಗದ ಕೆಜಿಐಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ಮಾಡಬಹುದು.

ಕ್ರಿಕೆಟ್ ಪಂದ್ಯಗಳು ನಡೆಯಲಿರುವ ದಿನಗಳಂದು ಕ್ರಿಕೆಟ್ ಅಭಿಮಾನಿಗಳಿಗೆ ಅನುಕೂಲವಾಗುವಂತೆ ಬಿಎಂಆರ್​​​ಸಿಎಲ್ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್‌ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20ರವರೆಗೆ ಮತ್ತು ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ನಿಲ್ದಾಣಗಳಿಗೆ ಕೊನೆಯ ರೈಲುಗಳು ರಾತ್ರಿ 11:55ಕ್ಕೆ ಹೊರಡಲಿವೆ. ಪ್ರಯಾಣಿಕರು ಮೆಟ್ರೋ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು, ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್‌ಗಳು (ಎನ್‌ಸಿಎಂಸಿ) ಮತ್ತು ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!