ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್‌ನ 3ನೇ ಆವೃತ್ತಿಯಲ್ಲಿ ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಪಂದ್ಯದಲ್ಲಿ 8 ರನ್‌ಗಳ ಭರ್ಜರಿ ಜಯ ಸಾಧಿಸಿ 2ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.
ವಿಶೇಷವೆಂದ್ರೆ 2023ರ ಮೊದಲ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧವೇ ಜಯಿಸಿ ಮುಂಬೈ ಚಾಂಪಿಯನ್ ಆಗಿತ್ತು. ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ತಂಡಕ್ಕೆ ಜೆಮಿಮಾ ಆಸರೆಯಾಗಿದ್ದರು. 5ನೇ ಎಸೆತದಲ್ಲಿ ಶಿಖಾ ಪಾಂಡೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದ್ರು. ಇದು ಮುಂಬೈ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿತು ಎಂದರೆ ತಪ್ಪಿಲ್ಲ.
ಮುಂಬೈ ಗೆಲುವಿನ ನಗೆ ಬೀರುತ್ತಿದ್ದಂತೆ ಫ್ರಾಂಚೈಸಿ ಮಾಲೀಕರಾದ ನೀತಾ ಅಂಬಾನಿ ನಾಯಕಿ ಹರ್ಮನ್ ಪ್ರೀತ್ ಅವರನ್ನ ಅಪ್ಪಿಕೊಂಡು ಸಂಭ್ರಮಿಸಿದರು.