ಹೊಸದಿಗಂತ ಡಿಜಿಟಲ್ ಡೆಸ್ಕ್;
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಕುಸ್ತಿಪಟು ಆಂತಿಮ್ ಪಂಘಲ್ ಅವರನ್ನು ಭಾರತೀಯ ಒಲಿಂಪಿಕ್ ಸಂಸ್ಥೆ ಮೂರು ವರ್ಷಗಳ ಕಾಲ ನಿಷೇಧಿಸಿದೆ .
ಬುಧವಾರ ನಡೆದ ಮಹಿಳೆಯರ 53 ಕೆಜಿ ವಿಭಾಗದ ಆರಂಭಿಕ ಪಂದ್ಯದಲ್ಲಿ ಸೋತ ನಂತರ ಅಂತಿಮ್ ಫಂಘಲ್ ಒಲಿಂಪಿಕ್ಸ್ ನಿಂದ ಹೊರಗುಳಿದಿದ್ದರು. ಬಳಿಕ ಶಿಸ್ತು ಉಲ್ಲಂಘನೆಯನ್ನು ಫ್ರೆಂಚ್ ಅಧಿಕಾರಿಗಳು ತನ್ನ ಗಮನಕ್ಕೆ ತಂದ ನಂತರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅವರನ್ನು ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು ವಾಪಸ್ ಕಳುಹಿಸಲು ನಿರ್ಧರಿಸಿತು.
ಪಂಘಲ್ ಅವರ ನಡವಳಿಕೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕ್ರೀಡಾಸ್ಫೂರ್ತಿ ಮತ್ತು ಶಿಸ್ತಿನ ಮಾನದಂಡಗಳನ್ನು ಎತ್ತಿಹಿಡಿಯಲು IOA ಈ ನಿರ್ಧಾರ ತೆಗೆದುಕೊಂಡಿದೆ ಎಂದು ವರದಿ ತಿಳಿಸಿದೆ.
‘ಶಿಸ್ತು ಉಲ್ಲಂಘನೆಯನ್ನು ಫ್ರೆಂಚ್ ಅಧಿಕಾರಿಗಳು ಐಒಎ ಗಮನಕ್ಕೆ ತಂದ ನಂತರ ಕುಸ್ತಿಪಟು ಪಂಘಲ್ ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು ವಾಪಸ್ ಕಳುಹಿಸಲು ಭಾರತೀಯ ಒಲಿಂಪಿಕ್ ಸಂಸ್ಥೆ ನಿರ್ಧರಿಸಿದೆಪಂಘಲ್ ಎಂದು ಐಒಎ ಹೇಳಿಕೆಯಲ್ಲಿ ತಿಳಿಸಿದೆ. ‘ಅವರು ಭಾರತಕ್ಕೆ ತಲುಪಿದ ನಂತರ ನಿರ್ಧಾರವನ್ನು ಔಪಚಾರಿಕವಾಗಿ ಘೋಷಿಸಲಾಗುವುದು’ಎಂದು ಮೂಲವನ್ನು ಉಲ್ಲೇಖಿಸಿ ವರದಿ ತಿಳಿಸಿದೆ.