ಆಸ್ಪತ್ರೆಯಲ್ಲಿ ಚಂದ್ರಶೇಖರ್ ಆಜಾದ್ ನ್ನು ಭೇಟಿ ಮಾಡಿದ ಕುಸ್ತಿಪಟು ಸಾಕ್ಷಿ ಮಲಿಕ್, ಪುನಿಯಾ: ದಾಳಿಕೋರರ ಬಂಧನಕ್ಕೆ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಜಾದ್ ಸಮಾಜ್ ಪಾರ್ಟಿ (Azad Samaj Party) ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad) ಮೇಲೆ ಮಂಗಳವಾರ ಮಾರಣಾಂತಿಕ ಹಲ್ಲೆ ನಡೆದಿದ್ದು, ಈ ಹಿನ್ನೆಲೆ ಅವರು ಆಸ್ಪತ್ರೆಯಲ್ಲಿ ದಾಖಲಿಸಲಗಿತ್ತು.

ಇಂದು ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ (Bajrang Punia) ಚಂದ್ರಶೇಖರ್ ಆಜಾದ್ (Chandrashekhar Azad) ಅವರನ್ನು ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.

ಬಳಿಕ ಮಾತನಾಡಿದ ಪುನಿಯಾ ಇಂದು ಸತ್ಯಕ್ಕಾಗಿ ಹೋರಾಡುವವರ ಮೇಲೆ ಮಾತ್ರ ದಾಳಿ ಮಾಡಲಾಗುತ್ತಿದೆ. ದಾಳಿಕೋರರನ್ನು ಆದಷ್ಟು ಬೇಗ ಬಂಧಿಸಬೇಕು ಎಂಬುದು ನಮ್ಮ ಏಕೈಕ ಬೇಡಿಕೆಯಾಗಿದೆ ಎಂದರು.

ಚಂದ್ರಶೇಖರ್ ಯಾವುದೇ ಒಂದು ಸಮಾಜದ ನಾಯಕನಲ್ಲ, ಇಡೀ ಸಮಾಜದ ನಾಯಕ. ಅದು ರೈತ ಚಳವಳಿಯಾಗಲಿ ಅಥವಾ ಕುಸ್ತಿಪಟುಗಳ ಹೋರಾಟವೇ ಆಗಿರಲಿ, ಅವರು ಸತ್ಯಕ್ಕಾಗಿ ಹೋರಾಡುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ನಿಂತಿದ್ದಾರೆ, ಚಂದ್ರಶೇಖರ್ ಅವರ ಪ್ರತಿಭಟನೆಗೆ ಸಂಪೂರ್ಣ ಬೆಂಬಲವಿದೆ ಎಂದು ಪುನಿಯಾ ಹೇಳಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದಾಗ, ನಾವು ಭೇಟಿಯಾಗಲು ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದ್ದಾರೆ. ಚಂದ್ರಶೇಖರ್ ಮೇಲಿನ ಹಲ್ಲೆಯನ್ನು ಖಂಡಿಸಿದ ಸಾಕ್ಷಿ ಮಲಿಕ್, ಇದು ನಾಚಿಕೆಗೇಡಿನ ಸಂಗತಿ. ಪೊಲೀಸರು ಕೂಡಲೇ ದಾಳಿಕೋರರನ್ನು ಗುರುತಿಸಿ ಬಂಧಿಸಬೇಕು ಎಂದು ಹೇಳಿದ್ದಾರೆ.

ಬುಧವಾರ ಸಂಜೆ ಸಹರಾನ್‌ಪುರ ಜಿಲ್ಲೆಯ ದಿಯೋಬಂದ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡು ಹಾರಿಸಿದ್ದು ಈ ದಾಳಿಯಲ್ಲಿ ಚಂದ್ರಶೇಖರ್ ಗಾಯಗೊಂಡಿದ್ದಾರೆ.

ಆಜಾದ್ ಅವರ ಸೊಂಟಕ್ಕೆ ಗುಂಡು ತಗುಲಿದ್ದು, ಚಿಕಿತ್ಸೆಗಾಗಿ ದೇವಬಂದ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ನಂತರ ಅವರನ್ನು ಸಹರಾನ್‌ಪುರದ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಜಾದ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಎಸ್‌ಯುವಿಯಲ್ಲಿ ಹಿಂತಿರುಗುತ್ತಿದ್ದಾಗ ದೇವಬಂದ್‌ನ ಗಾಂಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!