ಬಿಜೆಪಿಗೆ ಸೇರ್ಪಡೆಗೊಂಡ ಕುಸ್ತಿಪಟು ದಿ ಗ್ರೇಟ್‌ ಖಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕುಸ್ತಿಪಟು, ಡಬ್ಲ್ಯು ಡಬ್ಲ್ಯುಇ ಸ್ಟಾರ್‌ ದಲೀಪ್‌ ಸಿಂಗ್‌ ರಾಣಾ (ಖಲಿ) ಅವರು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಡಬ್ಲ್ಯು ಡಬ್ಲ್ಯುಇ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಖಲಿ ಅವರು ಇಂದು ಬೆಳಗ್ಗೆ ದೆಹಲಿಯ ಬಿಜೆಪಿ ಕಚೇರಿಗೆ ತೆರಳಿ ಮಧ್ಯಾಹ್ನ ಒಂದು ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಖಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದು. ಖಲಿ ಅವರು ನಮ್ಮ ಪಕ್ಷಕ್ಕೆ ಸೇರುವ ಮೂಲಕ ದೇಶದ ಜನರಿಗೆ ಸ್ಫೂರ್ತಿಯಾಗಿದ್ದಾರೆ.
22 ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಕುಸ್ತಿಗೆ ಪದಾರ್ಪಣೆ ಮಾಡಿದ್ದ ಖಲಿ ಅವರು ಮಾಜಿ ವಿಶ್ವ ಹೆವಿವೇಟ್‌ ಚಾಂಪಿಯನ್‌ ಆಗಿದ್ದರು, ಖಲಿ ಅವರು ಮೂಲತಃ ಹಿಮಾಚಲ ಪ್ರದೇಶದವರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!