ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕುಸ್ತಿಪಟು ವಿನೇಶ್ ಫೋಗಟ್ ಮಂಗಳವಾರ ಏಷ್ಯನ್ ಕ್ರೀಡಾಕೂಟದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟರ್’ನಲ್ಲಿ ಮಾಹಿತಿ ನೀಡಿದ ಅವರು, ಆಗಸ್ಟ್ 13ರಂದು ತರಬೇತಿಯ ಸಮಯದಲ್ಲಿ ಎಡ ಮೊಣಕಾಲಿಗೆ ಗಾಯವಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದೇನೆ ಎಂದು ಹೇಳಿದ್ದಾರೆ.
ಪರೀಕ್ಷೆಗಳನ್ನ ಮಾಡಿದ ಬಳಿಕ ದುರದೃಷ್ಟವಶಾತ್, ನಾನು ಚೇತರಿಸಿಕೊಳ್ಳಲು ಶಸ್ತ್ರಚಿಕಿತ್ಸೆಯೊಂದೇ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ ಎಂದು ಫೋಗಟ್ ಬರೆದಿದ್ದಾರೆ, ನಾನು ಆಗಸ್ಟ್ 17 ರಂದು ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತೇನೆ ಎಂದು ಎಂದಿದ್ದಾರೆ.
ಏಷ್ಯನ್ ಗೇಮ್ ನಲ್ಲಿ ಚಿನ್ನದ ಪದಕ ಗೆಲ್ಲುವುದು ನನ್ನ ಕನಸಾಗಿತ್ತು. ಆದರೆ ದುರದೃಷ್ಟವಶಾತ್, ಈ ಗಾಯವು ಈಗ ನನ್ನ ಭಾಗವಹಿಸುವಿಕೆಯನ್ನ ತಡೆದಿದೆ. ಮೀಸಲು ಆಟಗಾರನನ್ನು ಏಷ್ಯನ್ ಗೇಮ್ ಗೆ ಕಳುಹಿಸಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ ಎಂದು ಅವರು ಹೇಳಿದರು.
— Vinesh Phogat (@Phogat_Vinesh) August 15, 2023