ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ಸಮನ್ಸ್ ನೀಡಿದೆ.
ಆರೋಪ ಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಜು.18 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬ್ರಿಜ್ ಭೂಷಣ್ ಅವರಿಗೆ ಸೂಚನೆ ನೀಡಿದ್ದಾರೆ.
ಭಾರತ ಕುಸ್ತಿ ಫೆಡರೇಶನ್ನ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ಗೂ ನ್ಯಾಯಾಲಯ ಸಮನ್ಸ್ ನೀಡಿದೆ. ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ವಿರುದ್ಧ ನಗರ ಪೊಲೀಸರು ಜೂನ್ 15 ರಂದು ಲೈಂಗಿಕ ಕಿರುಕುಳ, ಹಿಂಬಾಲಿಸುವಿಕೆ ಮತ್ತು ಕ್ರಿಮಿನಲ್ ಬೆದರಿಕೆ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರು.
ತೋಮರ್ ವಿರುದ್ಧ IPC ಸೆಕ್ಷನ್ 109, ಅಪರಾಧಕ್ಕೆ ಕುಮ್ಮಕ್ಕು ನೀಡುವುದು, ಅಪರಾಧ ಬೆದರಿಕೆ, ಅಡಿಯಲ್ಲಿ ಅಪರಾಧಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ.