ಕುಸ್ತಿಪಟುಗಳ ಕಣ್ಣೀರು ಮೋದಿ ಸರ್ಕಾರದ ಕೊಡುಗೆ, ಭಾರತ ಇದಕ್ಕೆ ತಕ್ಕ ಉತ್ತರ ನೀಡಲಿದೆ: ಕಾಂಗ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಕ್ಕಿಲ್ಲ. ಆದರೆ ನಾವು ಸುಮ್ಮನೆ ಇರುವುದಿಲ್ಲ. ದೇಶ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು.

ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್‌ರನ್ನೇ ಮುಖ್ಯಸ್ಥರನ್ನಾಗಿ ಘೋಷಣೆ ಮಾಡಿದ ಕಾರಣ ಕಣ್ಣೀರಿಡುತ್ತಲೇ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ನಿವೃತ್ತಿ ಘೋಷಿಸಿದರು.

ನ್ಯಾಯಕ್ಕಾಗಿ ಮಾಡಿದ ಹೋರಾಟದಲ್ಲಿ ನಾನು ಸೋತಿದ್ದೇನೆ ಎಂದು ಸಾಕ್ಷಿ ಹೇಳಿದ್ದರು. ಬಿಜೆಪಿ ಆರೋಪಿಗಳನ್ನು ರಕ್ಷಿಸುವ ಕೆಲಸ ಮುಂದುವರಿಸಿದೆ. ನಮ್ಮ ಕುಸ್ತಿಪಟುಗಳ ಕಣ್ಣೀರಿಗೆ ಭಾರತ ತಕ್ಕ ಉತ್ತರ ನೀಡುತ್ತದೆ. ಇದು ಮೋದಿ ಸರ್ಕಾರದ ಕಣ್ಣೀರ ಕೊಡುಗೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!